ಭಯೋತ್ಪಾದಕರಿಗೆ ಹೀಗೆ ಬೆಂಬಲ ಕೊಡುತ್ತಾ ಇದ್ದರೆ ಕಾಂಗ್ರೆಸ್ ಅನ್ನೇ ಜನರು ಬ್ಯಾನ್ ಮಾಡುತ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದರು.
ಅವರು ಇಂದು ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಕಾಂಗ್ರೆಸ್ ಹಿಂದಿನಿಂದಲೂ ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡುತ್ತಾ ಬಂದಿದೆ. ಗಲಭೆಗಳು ಆದಾಗ ಭಯೋತ್ಪಾದಕರ ಪರವಾಗಿ ಮತ್ತು ಉಗ್ರಚಟುವಟಿಕೆಗಳನ್ನು ನಡೆಸುತ್ತಿರುವವರ ಪರವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದೆ. ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಸಾಕ್ಷಿ ಸಮೇತ ಸಿಕ್ಕಿದ ಉಗ್ರನನ್ನು ಬೆಂಬಲಿಸುವ ಹೇಳಿಕೆ ನೀಡಿದೆ. ಕಾಶ್ಮೀರ ಭಯೋತ್ಪಾದಕರು ಮತ್ತು ಬಾಂಬೆ ಬ್ಲಾಸ್ಟ್ ನಡೆದಾಗಲೂ ಕೂಡ ಕಾಂಗ್ರೆಸ್ ಉಗ್ರರ ಪರವಾದ ಹೇಳಿಕೆಯನ್ನು ನೀಡಿತ್ತು ಎಂದರು.
ಪಿಎಫ್‌ಐ ಮತ್ತು ಎಸ್‌ಡಿಪಿಐ ಬ್ಯಾನ್ ಮಾಡಬೇಕೆಂಬ ಒತ್ತಾಯ ಹೆಚ್ಚಿದಾಗ ಕೂಡ ಕಾಂಗ್ರೆಸ್ ನಿರಂತರವಾಗಿ ಯಾರು ಈ ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೋ ಅವರ ಪರವಾಗಿಯೇ ಹೇಳಿಕೆ ನೀಡುತ್ತಾ ಬಂದಿತ್ತು. ನ್ಯಾಯಾಲಯ ಕೂಡ ಪಿಎ??? ಬ್ಯಾನ್ ಮಾಡಿದ್ದು ಸರಿಯಿದೆ ಎಂದು ಹೇಳಿದಾಗಲೂ ಕಾಂಗ್ರೆಸ್ ಪಿಎಫ್‌ಐ ಪರ ಬ್ಯಾಟಿಂಗ್ ಮಾಡುತ್ತಾ ಬಂದಿದೆ. ಹೀಗೇ ಮುಂದುವರೆದರೆ ಮುಂದೆ ಸರ್ಕಾರ ಮತ್ತು ಜನ ಕಾಂಗ್ರೆಸ್ ಅನ್ನೇ ಬ್ಯಾನ್ ಮಾಡುತ್ತಾರೆ. ಇನ್ನಾದರೂ ಕಾಂಗ್ರೆಸ್ ಎಚ್ಚೆತ್ತು ದೇಶದ್ರೋಹಿಗಳ ಪರ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದರು.