Site icon TUNGATARANGA

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಳಿವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ

ಶಿವಮೊಗ್ಗ,
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ನಡೆಸಿರುವ ದಾಳಿವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.


ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹೆಚ್.ಎಸ್. ಸುಂದರೇಶ್, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ವಿರೋಧ ಪಕ್ಷಗಳ ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದ್ದು, ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಸಿಬಿಐ, ಐಟಿ, ಇಡಿ ಮುಂತಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ಕೈಗೊಂಬೆಯಾಗಿ ಮಾಡಿಕೊಂ ಡಿದೆ. ಚುನಾವಣೆ ಸಮಯದಲ್ಲಂತೂ ಕಾಂಗ್ರೆಸ್ ಮುಖಂಡರನ್ನು ಬೆದರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದುವರೆಗೂ ನಡೆದಿರುವ ಐಟಿ, ಸಿಬಿಐ, ಇಡಿ ದಾಳಿಗಳಲ್ಲಿ ಶೇ.೯೯ರಷ್ಟು ವಿರೋಧ ಪಕ್ಷಗಳ ಮುಖಂಡ ರುಗಳೇ ಇದ್ದಾರೆ ಎಂದು ಆರೋಪಿಸಿದರು.


ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಪದೇ ಪದೇ ವಿರೋಧ ಪಕ್ಷಗಳ ಪ್ರಭಾವಿ ನಾಯಕರ ಧ್ವನಿ ಅಡಗಿ ಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ದಲ್ಲೂ ಕೂಡ ಡಿ.ಕೆ. ಶಿವಕುಮಾರ್ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ೧೫೦ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರನ್ನು ಕಟ್ಟಿಹಾಕುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಡಿ.ಕೆ. ಶಿವಕುಮಾರ್ ಪ್ರಭಾವಿ ನಾಯಕರು ಎಂದು ಹೆದರಿ ಸಿಬಿಐ ದಾಳಿ ನಡೆಸಿದ್ದಾರೆ. ಬಿಜೆಪಿಯವರ ಶಿಕ್ಷಣ ಸಂಸ್ಥೆಗಳು ಯಾವೂ ಇಲ್ಲವೇ. ಡಿಕೆಶಿಯವರ ಶಿಕ್ಷಣ ಸಂಸ್ಥೆಯೇ ಇವರಿಗೆ ಬೇಕಿತ್ತೇ. ಚುನಾವಣೆ ಸಮಯ ಬಂದರೆ ಸಾಕು ಇಂತಹ ಕಿರುಕುಳಗಳನ್ನು ಮಾಡುತ್ತಾರೆ. ವಿಚಾರಣೆಯ ನೆಪದಲ್ಲಿ ಬೆದರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆಯಲ್ಲಿ ಪ್ರಮುಖರಾದ ರೇಖಾ ರಂಗನಾಥ್, ವಿಜಯಲಕ್ಷ್ಮಿ ಪಾಟೀಲ್, ಕೆ.ಬಿ.ಪ್ರಸನ್ನಕುಮಾರ್, ಹೆಚ್.ಸಿ. ಯೋಗೇಶ್, ಎಸ್.ಕೆ. ಮರಿಯಪ್ಪ, ರಮೇಶ್ ಶಂಕರಘಟ್ಟ, ಜಿ.ಡಿ.ಮಂಜು ನಾಥ್, ವಿ. ನಾರಾಯಣ ಸ್ವಾಮಿ, ಚಂದ್ರ ಭೂಪಾಲ್ ಇತರರಿದ್ದರು.

Exit mobile version