Site icon TUNGATARANGA

ಗೃಹ ಸಚಿವರ ತವರಲ್ಲಿ ಗೂಂಡಗಿರಿಯನ್ನು ಸಹಿಸಲ್ಲ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ಗೃಹ ಸಚಿವರ ತವರಲ್ಲಿ ಬಿಜಪಿ ಗೂಂಡಾಗಳ ಹಾವಳಿ ಹೆಚ್ಚಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ನಡೆಸಿ ಅವರೇ ದೂರು ಕೊಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ.


ನಿನ್ನೆ ತೀರ್ಥಹಳ್ಳಿಯ ಸುರಭಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ ಗಾಯಾಳುವಾಗಿದ್ದ ಹರೀಶ್ ಮತ್ತು ಸಚಿನ್‌ರವರನ್ನು ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಭೇಟಿ ಅರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.


ನಂತರ ಮಾಧ್ಯಮದವರ ಜೊತೆ ಮಾತನಾಡಿದ ಕಿಮ್ಮನೆ ರತ್ನಾಕರ್ ರವರು ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಗೃಹ ಇಲಾಖೆಯ ವಿಫಲತೆ ಎದ್ದು ಕಾಣುತ್ತಿದೆ. ಪೊಲೀಸರು ಬಿಜೆಪಿ ಗೂಂಡಾವರ್ತನೆಯ ಬಗ್ಗೆ ದೂರು ಸ್ವೀಕರಿಸಲ್ಲ. ಬದಲಿಗೆ ಅವರಿಗೆ ನೆರವಾಗುತ್ತಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಅರೋಪಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲದಿದ್ದರೆ ಪ್ರತಿಭಟನೆಯ ಹಾದಿ ಹಿಡಿಯುವುದು ಅನಿವಾರ್ಯವಾಗುತ್ತದೆ ಎಂದರು.


ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಜಗದೀಶ, ಸುಡೂರ್ ಶಿವಣ್ಣ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್, ಎನ್ ಎಸ್ ಯು ಐ ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್, ಅಲ್ಪಸಂಖ್ಯಾತ ಘಟಕದ ಮಹಮದ್ ನಿಹಾಲ್ , ಅರಿಫ್ , ರವಿ ಕಾಟಿಕೆರೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮರನಾಥ ಶೆಟ್ಟಿ, ಉಪಾಧ್ಯಕ್ಷರಾದ ಜಯಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ,ಕಟ್ಟೆಹಕ್ಲು ಫಣಿರಾಜ್, ನದಿಮ್ ಬೆಟಮಕ್ಕಿ ಮತ್ತಿತರರು ಉಪಸ್ಥಿತರಿದ್ದರು.

Exit mobile version