Site icon TUNGATARANGA

BIG NEWS ಸೋಮವಾರ ಕರ್ನಾಟಕ ಬಂದ್ ಏನಿರುತ್ತೆ? ಏನಿರಲ್ಲ..? ಫುಲ್ ಡಿಟೇಲ್ಸ್

ಬೆಂಗಳೂರು: ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಸೆ.28 ರ ಸೋಮವಾರ  ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಈ ಕುರಿತಂತೆ ಸುದ್ದಿಗಾರಿಗೆ ಮಾಡಿರುವ ರೈತ ಸಂಘದ ಅಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್, ಎಪಿಎಪಿ ತಿದ್ದುಪಡಿ ಕಾಯ್ದೆ ರೈತರಿಗೆ ಪೂರಕವಾದಂತ ಕಾಯ್ದೆ ಅಲ್ಲ. ಕಾರ್ಪೋರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡುವಂತ ಕಾಯ್ದೆಯಾಗಿದೆ.
ಇವರು ಕಾರ್ಪೋರೇಟ್ ಕಂಪನಿಗಳ ಪರವೇ ಹೊರತು, ಜನಸಾಮಾನ್ಯ ರೈತರ ಪರವಾದವರಲ್ಲ ಎಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಎಪಿಎಂಸಿ, ವಿದ್ಯುತ್, ಭೂಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ 32 ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ ಎನ್ನಲಾಗಿದೆ.
ಸೆ.25ರಂದು ಕರ್ನಾಟಕ ಬಂದ್ ನಡೆಸುವ ಬದಲಾಗಿ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಸೆ.28ರಂದು ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯಾಧ್ಯಂತ ಎಲ್ಲಾ ಸಂಘಟನೆಗಳು ನಮ್ಮ ಸೆ.28ರ ಕರ್ನಾಟಕ ಬಂದ್ ಗೆ ಬೆಂಬಲ ನೀಡಲಿವೆ ಎಂದು ಭಾವಿಸಿದ್ದೇವೆ. ಎಲ್ಲಾ ಸಂಘಟನೆಗಳು ಸೇರಿ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂಬುದಾಗಿ ಹೇಳಿದರು.

ಬಂದ್ ವೇಳೆ ಏನಿರುತ್ತೆ ಏನಿರಲ್ಲ ? ಏನಿರುತ್ತೆ?


ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.
ಏನಿರಲ್ಲ?
ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ.

Exit mobile version