ಬೆಂಗಳೂರು,ಸೆ23 :
ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಸೆ.28 ರ ಸೋಮವಾರ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲು ಮುಂದಾಗಿವೆ.
ಈ ಕುರಿತಂತೆ ಸುದ್ದಿಗಾರಿಗೆ ಮಾಡಿದಂತ ರೈತ ಸಂಘದ ಅಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್, ಎಪಿಎಪಿ ತಿದ್ದುಪಡಿ ಕಾಯ್ದೆ ರೈತರಿಗೆ ಪೂರಕವಾದಂತ ಕಾಯ್ದೆ ಅಲ್ಲ. ಕಾರ್ಪೋರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡುವಂತ ಕಾಯ್ದೆಯಾಗಿದೆ.
ಇವರು ಕಾರ್ಪೋರೇಟ್ ಕಂಪನಿಗಳ ಪರವೇ ಹೊರತು, ಜನಸಾಮಾನ್ಯ ರೈತರ ಪರವಾದವರಲ್ಲ ಎಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಎಪಿಎಂಸಿ, ವಿದ್ಯುತ್, ಭೂಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ 32 ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ ಎನ್ನಲಾಗಿದೆ.
ಸೆ.25ರಂದು ಕರ್ನಾಟಕ ಬಂದ್ ನಡೆಸುವ ಬದಲಾಗಿ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಸೆ.28ರಂದು ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯಾಧ್ಯಂತ ಎಲ್ಲಾ ಸಂಘಟನೆಗಳು ನಮ್ಮ ಸೆ.28ರ ಕರ್ನಾಟಕ ಬಂದ್ ಗೆ ಬೆಂಬಲ ನೀಡಲಿವೆ ಎಂದು ಭಾವಿಸಿದ್ದೇವೆ. ಎಲ್ಲಾ ಸಂಘಟೆಗಳು ಸೇರಿ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂಬುದಾಗಿ ಹೇಳಿದರು.
ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುವ ಸಾಧ್ಯತೆ ಇದೆ.
ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.
ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ.