ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೊಲೀಸರ ಕಾರ್ಯ ಶ್ಲಾಘನೀಯ. ಸಾಧಕರ ಗೌರವಿಸುವ ಕೆಲಸದಿಂದ ಇತರರಿಗೂ ಸ್ಫೂರ್ತಿ ಸಿಗುತ್ತದೆ ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.
ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಶೀರ್ಷಿಕೆಯಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟ್ರಾಫಿಕ್ ಪೊಲೀಸರಿಗೆ ಸನ್ಮಾನಿಸಿ ಮಾತನಾಡಿದರು.
ಬಿಸಿಲು, ಮಳೆ, ಚಳಿ ಎನ್ನದೇ ಪೊಲೀಸರು ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಸದ್ದಿಲ್ಲದೇ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಸೇವಾ ಸಂಸ್ಥೆಯಾಗಿದ್ದು, ಸಮಾಜಮುಖಿ ಆಲೋಚನೆಗಳೊಂದಿಗೆ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಸಂಸ್ಥೆ ವತಿಯಿಂದ ಪ್ರತಿ ತಿಂಗಳು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಮಾಜದ ಒಳಿತಿಗೆ ಸದ್ದಿಲ್ಲದೇ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗೌರವಿಸಲು ಉದ್ದೇಶಿಸಲಾಗಿದೆ. ವರ್ಷಪೂರ್ತಿ ಕಾರ್ಯಕ್ರಮ ನಡೆಯಲಿದೆ ಎಂದರು.
ಸೇವಾ ಚಟುವಟಿಕೆಗಳ ಜತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಶಾಲೆಗಳ ಅಭಿವೃದ್ಧಿಪಡಿಸಲು ನೆರವು ನೀಡುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಾಯ ಮಾಡುವ ಯೋಜನೆಗಳ ಅನು ಷ್ಠಾನಪಡಿಸಲಾಗುವುದು. ಆರೊಗ್ಯ ಜಾಗೃತಿ ಮೂಡಿ ಸುವ ಉಚಿತ ಶಿಬಿರಗಳನ್ನು ಸಾರ್ವಜನಿಕರ ಅನುಕೂಲ ಕ್ಕಾಗಿ ಆಯೋಜಿಸಲಾಗುವುದು ಎಂದು ತಿಳಿಸಿದರು.
ಪಿಎಸ್‌ಐ ತಿಮ್ಮಯ್ಯ, ಎಎಸ್‌ಐ ರಾಜ್ ಕುಮಾರ್, ಪಿಎಚ್‌ಸಿ ಮೋಹನ್ ಕುಮಾರ್, ತಿಮ್ಮೇ ಶಪ್ಪ, ಸಿಪಿಸಿ ರಾಘವೇಂದ್ರ ಹಾಗೂ ಕಲ್ಮೇಶ್ ಅವರಿಗೆ ಅಭಿನಂದಿಸಿ ಸನ್ಮಾನಿಸಲಾಯಿತು. ಭಾವನಾ ಕಾರ್ಯ ದರ್ಶಿ ಕವಿತಾ ಜೋಯಿಸ್ ಮತ್ತಿತರರು ಉಪಸ್ಥಿತರಿದ್ದರು.