Site icon TUNGATARANGA

ಸಾಗರ/ ನಮ್ಮ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿಲ್ಲ: ಶಾಸಕ ಎಚ್. ಹರತಾಳು ಹಾಲಪ್ಪ ಸ್ಪಷ್ಟನೆ

ಸಾಗರ : ನಮ್ಮ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿಲ್ಲ. ಹೊಸನಗರ ತಾಲ್ಲೂಕಿನಲ್ಲಿ ಸೋಂಕಿನ ಒಂದು ಪ್ರಕರಣ ದಾಖಲಾಗಿದ್ದು, ಅಗತ್ಯ ಮುಂಜಾಗೃತೆ ಕ್ಷೇತ್ರ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಇಲ್ಲಿನ ಸಾಮರ್ಥ್ಯಸೌಧದಲ್ಲಿ ಸೋಮವಾರ ಕೆಎಫ್‌ಡಿ ಸೇರಿದಂತೆ ವಿವಿಧ ಯೋಜನೆ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಕೆಎಫ್‌ಡಿ ಪ್ರಕರಣ ಸಂಪೂರ್ಣ ನಿಯಂತ್ರಣದಲ್ಲಿದೆ. ಬೇಸಿಗೆ ಸಮೀಪಿಸುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಂದಾಯ, ಗ್ರಾಮ ಪಂಚಾಯ್ತಿ, ಪಶುಪಾಲನಾ ಇಲಾಖೆ, ಅರಣ್ಯ ಇಲಾಖೆ ಸಮನ್ವಯತೆ ಸಾಧಿಸಲು ತಿಳಿಸಲಾಗಿದೆ ಎಂದರು.


ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಸೂಚನೆ ನೀಡಲಾಗಿದೆ. ವಿದ್ಯುತ್ ಮತ್ತು ಸ್ವಚ್ಚತೆ ಬಗ್ಗೆ ಗಮನ ಹರಿಸಲಾಗಿದೆ. ಜಾತ್ರೆ ಯಶಸ್ಸಿಗೆ ಎಲ್ಲ ರೀತಿಯ ಸಹಕಾರ ಕೊಡಲಾಗುತ್ತದೆ. ಜಾತ್ರೆ ಮುಗಿಯುವ ತನಕ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಪರಿಸ್ಥಿತಿ ನಿಭಾಯಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.


ಅಂಬಾರಗುಡ್ಡ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಣೆ ಮಾಡಿರುವ ಮಾಹಿತಿ ಇದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಇನ್ನೂ ಕೆಲವು ಜನರಿಗೆ ಬಗರ್‌ಹುಕುಂ ಹಕ್ಕುಪತ್ರ ಕೊಡಲು ಅವಕಾಶ ಇದ್ದು, ಅದನ್ನು ನೀಡಲಾಗುತ್ತದೆ. ಜಾತ್ರೆ ಸಂದರ್ಭದಲ್ಲಿ ವಾಹನ ನಿಲುಗಡೆಗೆ ಬೇರೆಬೇರೆ ಭಾಗದಲ್ಲಿ ಸ್ಥಳವನ್ನು ಗುರುತಿಸಲಾಗಿದೆ ಎಂದು ಹೇಳಿದರು.


ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ, ಸಾಮಾಜಿಕ ಅರಣ್ಯ ವಿಭಾಗದ ಯೋಗೇಶ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ನಾಗೇಶ್ ಬ್ಯಾಲಾಳ್ ಉಪಸ್ಥಿತರಿದ್ದರು

Exit mobile version