Site icon TUNGATARANGA

ವಾರದೊಳಗೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಘೋಷಣೆ: :ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಶಿವಮೊಗ್ಗ ನಗರ ಕ್ಷೇತ್ರದ ಪಕ್ಷದ ಅಭ್ಯರ್ಥಿಯ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್ನೊಂದು ವಾರದೊಳಗೆ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದ ೨ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿದ್ದೇನೆ ಎರಡೂ ಕ್ಷೇತ್ರಲದ್ಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತುಹಾಕುವುದೇ ಕಾಂಗ್ರೆಸ್‌ನ ಗುರಿಯಾಗಿದೆ. ಮಲೆನಾಡು ಭಾಗದಲ್ಲಿ ಹಲವು ಸಮಸ್ಯೆಗಳಿವೆ. ಶರಾವತಿ ಸಂತ್ರಸ್ತರ ಸಮಸ್ಯೆ, ಬಗರ್‌ಹುಕುಂ ಸಮಸ್ಯೆ ಹೀಗೆ ಎಲ್ಲಾ ಸಮಸ್ಯೆಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಿವಾರಿಸುತ್ತೇವೆ. ಈ ಬಗ್ಗೆ ಪ್ರನಾಳಿಕೆಯಲ್ಲೂ ಕಾಂಗ್ರೆಸ್ ಪ್ರಕಟಿಸುತ್ತದೆ ಎಂದರು.


ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರನ್ನು ಬೇಕಾದರೆ ಇಡಲಿ. ಆದರೆ ಅದಕ್ಕಾಗಿ ಭೂಮಿ ನೀಡಿದವರ ಸಮಸ್ಯೆಯನ್ನು ಅವರು ಬಗೆಹರಿಸಬೇಕು. ಜೊತೆಗೆ ವಿಐಎಸ್‌ಎಲ್ ಕಾರ್ಖಾನೆಯನ್ನೂ ಉಳಿಸಬೇಕು ಎಂದ ಅವರು, ಶಾಸಕ ಕೆ.ಎಸ್. ಈಶ್ವರಪ್ಪ ಮತ್ತು ಜಾರಕಿಹೊಳಿ ಮಾನಸಿಕವಾಗಿ ಹತಾಶರಾಗಿ ಏನೇನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಗೊಂದಲಗೊಂಡಿದ್ದಾರೆ ಎಂದು ಲೇವಡಿ ಮಾಡಿದರು.


ಇಡಿ ಮತ್ತು ಸಿಬಿಐ ನೋಟೀಸಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಫೆ.೨೨ರಂದು ವಿಚಾರಣೆಗೆ ಬರುವಂತೆ ನೋಟೀಸ್ ನೀಡಲಾಗಿದೆ. ನನ್ನ ಮಗಳಿಗೂ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನನ್ನ ಮಕ್ಕಳ ಶಿಕ್ಷಣದ ಶುಲ್ಕದ ಬಗ್ಗೆಯೂ ಮಾತನಾಡಿದ್ದಾರೆ . ಈ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಸಿಬಿಐಗೆ ಪತ್ರ ಬರೆಯುವೆ ಎಂದರು.

Exit mobile version