Site icon TUNGATARANGA

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಿಂದ ಡಾ. ಸುಧಾಮೂರ್ತಿಯವರಿಗೆ ವಿಜ್ಞಾತಂ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಪಟ್ಟಾಭಿಷೇಕದ ಅಂಗವಾಗಿ ಬರುವ ಫೆ. ೧೯ ಹಾಗೂ ೨೦ರಂದು ನಾಗಮಂಗಲದ ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಮೇಳವನ್ನು ಆಯೋಜಿಸಲಾಗಿದೆ.


ಮಹಾಸಂಸ್ಥಾನದ ಪೀಠಾಧ್ಯಕ್ಷರ ಪಟ್ಟಾಭಿಷೇಕದ ೧೦ನೇ ವರ್ಷದ ಅಂಗವಾಗಿ ಮೇಳವನ್ನು ಆಯೋ ಜಿಸಲಾಗಿದ್ದು, ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ ಪ್ರೊ.ಪಿ.ಜಿ. ಸೀತಾರಾಮ ಅವರು ಉದ್ಘಾಟಿಸಲಿದ್ದು, ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಕಂದಾಯ ಸಚಿವ ಅಶೋಕ್ ಹಾಗೂ ಇತರರು ಭಾಗವಹಿಸಲಿದ್ದಾರೆ.


ವಿಶೇಷವಾಗಿ ಮೇಳದಲ್ಲಿ ರಾಜ್ಯದ ಆದಿಚುಂಚ ನಗಿರಿ ಶಿಕ್ಷಣ ಸಂಸ್ಥೆಗಳ ಕಾಲೇಜುಗಳು ಭಾಗವಹಿಸಲಿವೆ. ಬರುವ ಫೆ ೨೦ರಂದು ಶ್ರೀಗಳಿಗೆ ವಾರ್ಷಿಕ ಪಟ್ಟಾಭಿಷೇಕ ನಡೆಯಲಿದ್ದು, ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಇತರ ಗಣ್ಯರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ೨೦೨೩ ನೇ ಸಾಲಿನ ವಿಜ್ಞಾತಂ ಪ್ರಶಸ್ತಿಯನ್ನು ಇನ್ಪೋಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ ಡಾ. ಸುಧಾ ಮೂರ್ತಿ ಅವರಿಗೆ ಪ್ರಧಾನ ಮಾಡಲಾಗುವುದು.
ಈ ಎರಡು ದಿನದ ಕಾರ್ಯಕ್ರಮದಲ್ಲಿ ಪ್ರತಿದಿನ ರಾಜ್ಯದ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಕ್ಕೆ ಸರ್ವರನ್ನು ಹಾಗೂ ಭಕ್ತರನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಸ್ವಾಗತಿಸಿದ್ದಾರೆ.

Exit mobile version