Site icon TUNGATARANGA

BIGG BREAKING ಕನ್ನಡದ ಹಿರಿಯ ವಿಮರ್ಶಕ ಜಿ.ಎಸ್.ಅಮೂರು ವಿಧಿ ವಶ

ಧಾರವಾಡ : ಕನ್ನಡದ ಹಿರಿಯ ಖ್ಯಾತ ಸಾಹಿತಿ ಜಿ.ಎಸ್.ಆಮೂರ ಅವರು ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಜಿ.ಎಸ್.ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಅವರಿಗೆ ಸಂದಿದ್ದವು.
ಆಧುನಿಕ ಕನ್ನಡಸಾಹಿತ್ಯ ವಿಮರ್ಶಕರಲ್ಲಿ ಅತಿ ಅಗ್ರಮಾನ್ಯರಲ್ಲೊಬ್ಬರೆಂದು ಪರಿಗಣಿಸಲ್ಪಟ್ಟಿರುವ ಡಾ. ಅಮೂರ ರವರು, ಕರ್ನಾಟಕ ರಾಜ್ಯಸರ್ಕಾರಪ್ರದಾನಮಾಡುವ, ಪಂಪ ಪ್ರಶಸ್ತಿವಿಜೇತರು. ಕನ್ನಡ ಹಾಗೂ ಇಂಗ್ಲೀಷ್ ಸಾಹಿತ್ಯಪ್ರಾಕಾರಗಳಲ್ಲಿ ಪ್ರಕಾಂಡ ಪಂಡಿತರೆಂದು ಪರಿಗಳಿಸಲ್ಪಟ್ಟಿದ್ದರು.
ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ೪-೫ ದಶಕಗಳಿಂದಲೂ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ೧೯೨೫ ರ ಮೇ ೮ ರಂದು. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಮನೆಗೆ ತರುತ್ತಿದ್ದ ಸದ್ಭೋಧ ಚಂದ್ರಿಕಾ, ಕರ್ಮವೀರ ಮುಂತಾದ ಪತ್ರಿಕೆಗಳ ಸಂಗ್ರಹವೇ ಇದ್ದು ಇದನ್ನೂ ಓದುತ್ತಾ ಬಂದಂತೆಲ್ಲಾ ಆಮೂರರಿಗೆ ಸಾಹಿತ್ಯದಲ್ಲಿ ಆಸ್ಥೆ ಬೆಳೆಯ ತೊಡಗಿತು. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕರಾಗಿ ದೊರೆತ ಹುಚ್ಚೂರಾವ್‌ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್‌.ಜಿ. ಗುತ್ತಲ ಮಾಸ್ತರು ಇಂಗ್ಲಿಷ್‌ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು.
ಕೃತಿಗಳು: ದಿ ಕಾನ್ಸೆಪ್ಟ್‌ ಆಫ್‌ ಕಾಮಿಡಿ, ಮನೋಹರ ಮಳಗಾಂವ್‌ಕರ್, ಆದ್ಯರಂಗಾಚಾಯ್, ದಿ ಕ್ರಿಟಿಕಲ್‌ ಸ್ಪೆಕ್ಟ್ರಮ್‌, ಇಮೇಜಸ್‌ ಅಂಡ್‌ ಇಂಪ್ರೆಷನ್ಸ್‌, ಎ.ಎನ್‌. ಕೃಷ್ಣರಾವ್‌, ಕ್ರಿಯೇಷನ್ಸ್‌ ಅಂಡ್‌ ಟ್ರಾನ್ಸ್‌ ಕ್ರಿಯೇಷನ್ಸ್‌, ದತ್ತಾತ್ರೇಯ ರಾಮಚಂದ್ರಬೇಂದ್ರೆ, ಪರ್ಸೆಷನ್ಸ್‌ ಆಫ್‌ ಮಾಡರ್ನ್ ಲಿಟರೇಚರ್, ಮೊದಲಾದ ೧೪ ಕೃತಿಗಳ ಜೊತೆಗೆ ಕ್ರಿಟಿಕಲ್‌ ಎಸ್ಸೆಸ್‌ ಹ್ಯಾನ್‌ ಇಂಡಿಯನ್‌ ರೈಟಿಂಗ್‌ ಇನ್‌ ಇಂಗ್ಲಿಷ್‌, ಕಾಲೊನಿಯಲ್‌ ಕೌನ್ಷಿಯಸ್ ನೆಸ್‌ ಇನ್‌ ಕಾಮನ್‌ವೆಲ್ತ್ ಲಿಟರೇಚರ್ ಮುಂತಾದ ಆರು ಕೃತಿಗಳನ್ನೂ ಸಂಪಾದಿಸಿದ್ದಾರೆ.

Exit mobile version