Site icon TUNGATARANGA

ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನುಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ ಕಾಂಗ್ರೆಸ್ ಅರೋಪ

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಆಗ್ರಹಿಸಿ ನಗರ ದಕ್ಷಿನ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇಂದು ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.


ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನುಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ. ರಾಜ್ಯದಲ್ಲಿ ಹಲವು ಇಂದಿರಾ ಕ್ಯಾಂಟೀನುಗಳು ಮುಚ್ಚಿವೆ. ಇದಕ್ಕೆ ಬಹುಮುಖ್ಯ ಕಾರಣ ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಇರುವುದು, ಶುಚಿತ್ವ ಕಾಪಾಡದೆ ಇರುವುದು, ಗುಣಮಟ್ಟದ ಆಹಾರ ನೀಡದಿರುವುದೇ ಆಗಿದೆ. ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಈ ಕ್ಯಾಂಟೀನುಗಳನ್ನು ಮುಚ್ಚುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಕಾರರು ತಿಳಿಸಿದರು.


ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇದರು. ಹಸಿವಿನಿಂದ ಯಾರೂ ನರಳಬಾರದು. ಹಸಿವುಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನುಗಳನ್ನು ತೆರೆದು ಕೇವಲ ೫ರೂಗೆ ತಿಂಡಿ, ೧೦ರೂ.ಗೆ ಊಟ ದೊರೆಯುತ್ತಿತ್ತು. ಇದೊಂದು ದೂರದೃಷ್ಟಿ ಯೋಜನೆಯಾಗಿತ್ತು. ಬಡವರಿಗೆ ವರದಾನವಾಗಿತ್ತು. ಆದರೆ ರಾಜ್ಯ ಸರ್ಕಾರ ಇಂತಹ ಯೋಜನೆಯನ್ನು ಮುಚ್ಚಿಬಿಡುವ ಹುನ್ನಾರ ನಡೆಸುತ್ತಿದೆ. ಬಡವರ ಅನ್ನವನ್ನು ಕಸಿದುಕೊಳ್ಳುತ್ತಿದೆ ಎಂದು ದೂರಿದರು.


ತಕ್ಷಣವೇ ನಗರ ಪಾಲಿಕೆ ಶಿವಮೊಗ್ಗ ನಗರದಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನುಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಕ್ಯಾಂಟೀನುಗಳನ್ನು ಶುಚಿಯಾಗಿಟ್ಟುಕೊಂಡು ಗುಣಮಟ್ಟದ ಆಹಾರವನ್ನು ನಾಗರಿಕರಿಗೆ ನೀಡಬೇಕು ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದರು.


ಈ ಸಂದರ್ಭದಲ್ಲಿ ನಗರ ದಕ್ಷಿಣ ಬ್ಲಾಕ್ ಸಮಿತಿ ಅಧ್ಯಕ್ಷ ಕಲೀಂ ಪಾಷಾ, ಹಾಗೂ ಮುಖಂಡರುಗಳಾದ ಕೆ.ಬಿ. ಪ್ರಸನ್ನಕುಮಾರ್, ಎನ್. ರಮೇಶ್, ಟಿ. ಕೃಷ್ಣಪ್ಪ, ಯೋಗೀಶ್, ಕಾಶಿ ವಿಶ್ವನಾಥ್, ಸುವರ್ಣಾ ನಾಗರಾಜ್, ಎಸ್.ಕೆ. ಮರಿಯಪ್ಪ, ವಿಜಯ್, ಮಧುಸೂದನ್, ರವಿ, ವೈ.ಹೆಚ್.ನಾಗರಾಜ್ ಎಸ್.ಪಿ. ಶೇಷಾದ್ರಿ, ಸ್ಟೆಲ್ಲಾ ಮಾರ್ಟಿನ್, ಅರ್ಚನಾ, ಗ್ಲ್ಯಾಡಿ, ದೀಪಕ್ ಸಿಂಗ್, ರಾಜಶೇಖರ್ ಸೇರಿದಂತೆ ಹಲವರಿದ್ದರು.

Exit mobile version