Site icon TUNGATARANGA

ಫೆ.27: ರಂದು ಉದ್ಘಾಟನೆಯಾಗುವ ವಿಮಾನ ನಿಲ್ದಾಣದ ಬಗ್ಗೆ ಜಿಲ್ಲಾಧಿಕಾರಿ ಸೆಲ್ವಮಣಿ ಏನು ಹೇಳಿದ್ರು? ಸಂಪೂರ್ಣ ವಿವರ ಇಲ್ಲಿದೆ ನೋಡಿ

ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.೨೭ ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸ ಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.
ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣ ಮತ್ತು ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದ ಸಿದ್ದತೆ ಕುರಿತು ಮಾಹಿತಿ ನೀಡಿದರು.


ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತವು ಸಾರ್ವಜನಿ ಕರನ್ನು ಸ್ವಾಗತಿಸುತ್ತಿದ್ದು, ೧ ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ೦೨ ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ ೧೦೦ ಕೌಂಟರ‍್ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ ೦೪ ಕಡೆ ವಿಶಾಲವಾದ ಪ್ರಾಜೆಕ್ಟರ‍್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಅಗತ್ಯ ಎಲ್ಲ ಸಿದ್ದತೆಗಳೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.


ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆಗಳನ್ನು ಅಳವಡಿಸಲಾಗಿದೆ. ಎಲ್ಲ ಸಾರ್ವಜನಿಕರು ಬೆಳಿಗ್ಗೆ ೧೦ ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು. ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು.
ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‌ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‌ಗಳನ್ನು ತರುವಂ ತಿಲ್ಲ. ಮೊಬೈಲ್ ಮತ್ತು ಪರ್ಸ್‌ಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ ಎಂದು ತಿಳಿಸಿದರು.

Exit mobile version