ವಿಮಾನ ನಿಲ್ದಾಣ ಉದ್ಘಾಟನೆಯಿಂದ ಮಲೆನಾಡ ಅಭಿವೃದ್ಧಿಯ ವೇಗ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿರುವುದು ನನಗೆ ತುಂಬಾ ಸಂತೋಷವಾಗಿದೆ ಇದು ಸುವರ್ಣ ದಿನವಾಗಿದೆ.
ಭಾರತದ ಮೂಲೆಮೂಲೆಗೂ ಸಂಪರ್ಕ ಕಲ್ಪಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತದೆ. ಇನ್ನು ಎರಡೇ ವರ್ಷದಲ್ಲಿ ಇದು ಅಂತರರಾಷ್ಟೀಯ ವಿಮಾನ ನಿಲ್ದಾಣ ಆಗಲಿದೆ ಎಂದರು.
ಇದರ ಜೊತೆಗೆ ಉದ್ಯೋಗ ಅವಕಾಶಗಳು ಹೆಚ್ಚುತ್ತವೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಾಗುವಲ್ಲಿ ಸಂಶಯವಿಲ್ಲ. ಮೋದಿಯವರು ರಾಜ್ಯಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಸುಮಾರು ೩೪ ಸಾವಿರ ಕೋಟಿ ಹಣವನ್ನು ರಾಜ್ಯದ ಅಭಿವೃದ್ಧಿಗೆ ನೀಡಿದ್ದಾರೆ
. ಹಾಗೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬದ ದಿನದಂದೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿರುವುದು ಸಂತೋಷದ ವಿಷಯವಾಗಿದೆ. ನಮ್ಮ ಸರ್ಕಾರ ಎಲ್ಲ ರೀತಿಯ ಅಭಿವೃದ್ಧಿಗೆ ಸಹಕರಿಸಲಿದೆ ಎಂದರು.