ಏಳನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಚುನಾವಣಾ ನೀತಿ ಸಮಿತಿ ಜಾರಿಗೆ ಮೊದಲು ಆಯೋಗದ ವರದಿಯನ್ನು ಅನುಷ್ಠಾನಗೊಳಿಸಬೇಕು ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಮಾರ್ಚ್ 1 ರಿಂದ ನಡೆಯಲಿರುವ ಸರ್ಕಾರಿ ನೌಕರರ ರಾಜ್ಯ ವ್ಯಾಪಿ ಮುಷ್ಕರಕ್ಕೆ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲೆಗೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆಗೆ ಬೆಂಬಲಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಎಂ ರವಿ ಮನವಿ ಮಾಡಿದ್ದಾರೆ.
ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಅನಿರ್ದಿಷ್ಟಾವಧಿಯ ಈ ಮುಷ್ಕರ ಮುಗಿಯುವವರೆಗೂ ನಮ್ಮ ಬೇಡಿಕೆ ಈಡೇರವವರೆಗೂ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆಗೆ ಬೆಂಬಲಿಸುವಂತೆ ಕೋರಿದ್ದಾರೆ