Site icon TUNGATARANGA

1.60 ಕೋಟಿ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅಶೋಕ್ ನಾಯ್ಕ್

ಶಿವಮೊಗ್ಗ, ಸೆ.29:
ಜನರ ಅಭ್ಯುದಯಕ್ಕಾಗಿ ಸಾರಿಗೆ ವ್ಯವಸ್ಥೆಯ ಸುಗಮಕ್ಕೆ ರಸ್ತೆಗಳ ದುರಸ್ತಿ ಹಾಗೂ ನಿರ್ಮಾಣ ಅತ್ಯಗತ್ಯ. ಇದು ನಮ್ಮ ಆರ್ಥಿಕ ಮಟ್ಟದ ಅಭಿವೃದ್ಧಿಗೆ ಪೂರಕವಾಗಿರುತ್ತದೆ ಎಂದು ಶಾಸಕ ಅಶೋಕ್ ನಾಯ್ಕ್ ತಿಳಿಸಿದರು.
ಅವರು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹರಿಗೆಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ SFC ಇಲಾಖೆಯಿಂದ ಮಂಜೂರಾದ 1ಕೋಟಿ 60 ಲಕ್ಷ ಮೊತ್ತದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗಳ ಅಭಿವೃದ್ದಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಗುದ್ದಲಿ ಪೂಜೆ


ಗ್ರಾಮಗಳ ಅಭಿವೃದ್ಧಿ­ಯಿಂದಲೇ ದೇಶದ ಅಭಿವೃದ್ಧಿ ಸಾಧ್ಯವಿದೆ. ಅಭಿವೃದ್ಧಿಗೆ ಉತ್ತಮ ರಸ್ತೆ­ಗಳು ಅತ್ಯಗತ್ಯ ಎಂದ ಅವರು ಈ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿಗೆ ಮೊದಲ ಪ್ರಾಶಸ್ತ್ಯ ನೀಡಿ, ನನ್ನ ಮತ ಕ್ಷೇತ್ರದ ಅಭಿವೃದ್ದಿಗೆ ಪೂರಕವಾಗಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ ಬಿ ಅಶೋಕ್ ನಾಯ್ಕ್ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಜಗದೀಶ್, ಮಹಾನಗರ ಪಾಲಿಕೆ ಮಹಾಪೌರರಾದ ಸುವರ್ಣ ಶಂಕರ್,ಉಪಮಹಪೌರರಾದ ಸುರೇಖಾ ಮುರುಳಿಧರ್ ಹಾಗೂ ಜನಪ್ರತಿನಿಧಿಗಳು, ಸ್ಥಳೀಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version