Site icon TUNGATARANGA

ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ

*
ಶಿವಮೊಗ್ಗ
    ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.01 ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆಯು ಬೆಂಬಲಿಸುತ್ತದೆ.


     ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ;
01-07-2022 ರಿಂದ ಪರಿಷ್ಕøತ ವೇತನ ಭತ್ಯೆಗಳಿಗೆ ಅರ್ಹರಾಗಿದ್ದು, ಆರನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು ಚುನಾವಣಾ ನೀತಿ ಸಂಹಿತೆ ಜಾರಿಯ ಮೊದಲು ಶೇ.40 ಫಿಟ್‍ಮೆಂಟ್ ಸೌಲಭ್ಯವನ್ನು ದಿನಾಂಕ: 01-07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.


     ರಾಜ್ಯದ ಎನ್‍ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಕಷ್ಟಕರವಾಗುವುದರಿಂದ ಎನ್‍ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ ಆಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‍ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್‍ಪಿಎಸ್ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಬೇಡಿಕೆಗಳನ್ನು ಸಂಘ ಇಟ್ಟಿದೆ.


      ಆದ್ದರಿಂದ ಜಿಲ್ಲೆಯ ಸಮಸ್ತ ಕಂದಾಯ ಇಲಾಖೆಯ ವ್ಯಾಪ್ತಿಗೊಳಪಡುವ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಶಿವಮೊಗ್ಗ/ಸಾಗರ ಉಪವಿಭಾಗ, ಎಲ್ಲಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿ, ನಾಡ ಕಚೇರಿ ವ್ಯಾಪ್ತಿಯ ಎಲ್ಲಾ ವೃಂದದ ಕಚೇರಿ ಹಾಗೂ ಕಾರ್ಯನಿರ್ವಾಹಕ ಸಿಬ್ಬಂದಿಗಳು, ಗ್ರಾಮ ಸಹಾಯಕರು, ಹೊರಗುತ್ತಿಗೆ ಡಾಟಾ ಎಂಟ್ರಿ ಆಪರೇಟರ್‍ಗಳು

ದಿನಾಂಕ: 01-03-2023 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮುಖಾಂತರ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಅರುಣ್‍ಕುಮಾರ್ ಕೆ, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಮಾರ್ ಬಿ, ಖಜಾಂಚಿ ಮಹಾರುದ್ರಪ್ಪ ಬಿ ತಿಳಿಸಿದ್ದಾರೆ.

Exit mobile version