Site icon TUNGATARANGA

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪುನಶ್ಚೇತನ  ಕಾರ್ಯಕ್ರಮ


ಶಿವಮೊಗ್ಗ,
          ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ

ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಪ್ತಾಹ ಕಾರ್ಯಕ್ರಮ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮ ‘ಸ್ವೀಪ್ – 2023’ ನ್ನು ಮಾ.07 ರಂದು ಬೆಳಗ್ಗೆ 10 ಗಂಟೆಗೆ ಆಲ್ಕೋಳದಲ್ಲಿನ ಚೈತನ್ಯ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.


      ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜಣ್ಣ ಸಂಕಣ್ಣನವರ್ ನೆರೆವೇರಿಸುವರು. ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಉಪನಿರ್ದೇಶಕರಾದ ಜಿ.ಜಿ.ಸುರೇಶ್ ವಹಿಸುವರು. ಘನ ಉಪಸ್ಥಿತಿಯನ್ನು ಎಸ್‍ಎಂಎಸ್‍ಎಸ್ ನ ನಿರ್ದೇಶಕರಾದ ಫಾದರ್ ಕ್ಲಿಫರ್ಡ್ ರೋಷನ್ ಪಿಂಟೊ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಜಿಲ್ಲಾ ನಿರೂಪಣಾಧಿಕಾರಿ ಚಂದ್ರಪ್ಪ ಎನ್,. ಸಂಪನ್ಮೂಲ ವ್ಯಕ್ತಿಗಳಾಗಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ನ್ಯಾಸ್ಸಿ ಲವೀನಾ ಪಿಂಟೊ ವಹಿಸುವರು.

Exit mobile version