ಕೇಂದ್ರ ಸರ್ಕಾರ ಅಡಿಗೆ ಅನಿಲ, ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತವಾಗಿ ಹೆಚ್ಚಿಸುತ್ತಿರುವುದರಿಂದ ಮಧ್ಯಮ ವರ್ಗ ಮತ್ತು ಜನಸಾಮಾನ್ಯರ ಬದುಕು ಅತ್ಯಂತದುಸ್ತರವಾಗಿದೆ ಎಂದು ಆರೋಪಿಸಿ ಶಿವಮೊಗ್ಗ ಮಹಾನಗರ ಜಾತ್ಯತೀತ ಜನತಾದಳ ವತಿಯಿಂದ ಇಂದು ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿ ಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಂಭಾಗ ರಸ್ತೆಯಲ್ಲಿ ಸೌದೆ ಒಲೆಯಲ್ಲಿ ಅಡಿಕೆ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.
ಪದೇಪದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿರುವುದರಿಂದ ಬಡವರು, ಕೂಲಿ ಕಾರ್ಮಿಕರು ಮತ್ತು ಅಸಹಾಯಕ ಜನರ ಗೋಳು ನಿತ್ಯವೂ ಹೇಳತೀರದು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ ಹದಗೆಟ್ಟಿದ್ದು ಶ್ರೀಸಾಮಾನ್ಯನ ಬದುಕಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನ ಕಾರರು ದೂರಿದರು.
ರಾಜ್ಯದಲ್ಲಿ ಗುತ್ತಿಗೆದಾರರಿಂದ ಶೇ.೪೦ರಷ್ಟು ಕಮಿಷನ್ನಿನ ಅವಾಂತರದಿಂ ದಾಗಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಈಗಾಗಲೇ ಒಬ್ಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಇತ್ತೀಚೆಗೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪುತ್ತ ಕಮಿಷನ್ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆದು ಕೋಟಿ ಕೋಟಿ ಹಣ ಸಿಕ್ಕಿದ್ದು, ಪ್ರಕರಣದ ಎ-೧ಆರೋಪಿಯಾದ ಶಾಸಕರನ್ನು ಈವರೆಗೂ ಬಂಧಿಸಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿಯಿಂದಾಗಿ ಯಾವ ಕೆಲಸವೂ ಆಗುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆರೋಪಿಸಿದರು.
ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಭ್ರಷ್ಟಾಚಾರದ ನಿಯಂತ್ರಣದ ಬಗ್ಗೆ ಮತ್ತು ಅಗತ್ಯ ಬೆಲೆ ಕೂಡಲೇ ಇಳಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡುವುದರ ಮೂಲಕ ಸಂಪೂರ್ಣ ಅಧೋಗತಿಗೆ ತಲುಪಿರುವ ಶ್ರೀಸಾಮಾನ್ಯನ ಬದುಕಿಗೆ ನೆರವಾಗುವಂತೆ ಮನವಿಯಲ್ಲಿ ಒತ್ತಾಯಿ ಸಲಾಗಿದೆ.
ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ನಾಗರಾಜ್ ಕಂಕಾರಿ, ಸತ್ಯನಾರಾಯಣ ರಾವ್, ಪ್ರಮುಖರಾದ ಗೋವಿಂದಪ್ಪ, ಸಿದ್ದಪ್ಪ, ಎಂ. ರಾಜಣ್ಣ, ಬಿ.ಎಸ್ .ವಿನಯ್, ಹೆಚ್.ಆರ್. ತ್ಯಾಗರಾಜ್, ಡಾ.ಶಾಂತಾ ಸುರೇಂದ್ರ, ಎಸ್.ಕೆ. ಭಾಸ್ಕರ್, ಗೀತಾ ಸತೀಶ್, ಎಸ್.ಟಿ. ಪುಷ್ಪಾವತಿ, ಉಷಾ ನಾಯಕ್, ಹೆಚ್.ಎಂ. ಸಂಗಯ್ಯ ಇನ್ನಿತರರು ಇದ್ದರ