ಶಿವಮೊಗ್ಗ,
ವಿದ್ಯುತ್ ಪರಿವರ್ತಕ (ಟ್ರಾನ್ಸ್’ಫಾರ್ಮಾರ್) ಸ್ಫೋಟಿಸಿದ ಪರಿಣಾಮ, ಮನೆಯೊಂದರಲ್ಲಿ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ನಗರದ ಹೊರವಲಯ ಗೋಪಿಶೆಟ್ಟಿಕೊಪ್ಪ ಬಡಾವಣೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಎಲ್.ಐ.ಸಿ. ಏಜೆಂಟ್ ಶ್ರೀಧರಮೂರ್ತಿ ಎಂಬುವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಫ್ರಿಡ್ಜ್, ಬಟ್ಟೆ, ದಿನಸಿ ಸಾಮಗ್ರಿಗಳು ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣ, ವಿದ್ಯುತ್ ವೈರಿಂಗ್ ಗಳು ಸುಟ್ಟು ಕರಕಲಾಗಿವೆ. ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸುತ್ತಮುತ್ತಲಿನ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಮನೆಗೆ ಹೊತ್ತಿದ್ದ ಬೆಂಕಿ ನಂದಿಸಿದೆ.
‘ಬಡಾವಣೆಯಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮಾರ್ ವೊಂದು ಸ್ಫೋಟಗೊಂಡ ನಂತರ ಶಾರ್ಟ್ ಸರ್ಕ್ಯೂಟ್ ಉಂಟಾಗಿ ತಾವು ಬಾಡಿಗೆಗಿರುವ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನೆ ನಡೆದ ವೇಳೆ ತಾವು ಕಾರ್ಯನಿಮಿತ್ತ ಮನೆಯಿಂದ ಹೊರತೆರಳಿದ್ದೆ. ಇದರಿಂದ ಬದುಕುಳಿದುಕೊಂಡಿದ್ದೆನೆ’
ಎಂದು ಶ್ರೀಧರಮೂರ್ತಿ ಅವರು ಮಾಹಿತಿ ನೀಡಿದ್ದಾರೆ.
ಬಡಾವಣೆಯ ಹಲವು ಮನೆಗಳಲ್ಲಿ ಟಿವಿ, ಫ್ರೀಡ್ಜ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಳಾಗಿವೆ. ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮಾರ್ ದುರಸ್ತಿಗೊಳಿಸುತ್ತಿದ್ದಾರೆ ಎಂದು ಸ್ಥಳೀಯರು
ಮಾಹಿತಿ ನೀಡಿದ್ದು,
ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.