Site icon TUNGATARANGA

ಬಿಜೆಪಿ ಮತ್ತೆ ಅಧಿಕಾರಕ್ಕೆ: ಸಂಸದ ತೇಜಸ್ವಿ ಸೂರ್ಯ

ಸೇವೆಯೇ ಸಂಘಟನೆ ಎಂಬ ಆಧಾರದಮೇಲೆ ಬಿಜೆಪಿ ಯುವಮೋರ್ಚಾ ಕಾರ್ಯಮಾಡುತ್ತಿದ್ದು, ಚುನಾವಣೆ ಹತ್ತಿರ ಬಂದಾಗ ಪಂಚರತ್ನ ಎಂದು ಓಡುವ ಪಾರ್ಟಿ ಬಿಜೆಪಿ ಅಲ್ಲ. ಪಂಚವರ್ಷ ಗಳಿಂ ದಲೂ ಸಾಮಾಜಿಕ, ಅಭಿವೃದ್ಧಿ ಮಾಡುವ ಪಕ್ಷ ಬಿಜೆಪಿಯಾಗಿದ್ದು,

ಜಿಲ್ಲೆಯ ೭ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ೧೩೦ಕ್ಕೂ ಅಧಿಕ ಸ್ಥಾನ ಪಡೆಯುವುದರ ಮೂಲಕ ಮತ್ತೆ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ರಾಷ್ಟ್ರೀಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.


ಅವರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ವತಿಯಿಂದ ಹಮ್ಮಿಕೊಂಡಿದ್ದ ಯುವ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಎಲ್ಲಾ ಮೋರ್ಚಾಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಮಾವೇಶ ಮಾಡಿ ಡಬಲ್ ಇಂಜಿನ್ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ.ಸಂದೀಪ್ ಕುಮಾರ್ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ.ಹರಿಕೃಷ್ಣ, ಶಾಸಕ ಕೆ.ಬಿ.ಅಶೋಕ್‌ನಾಯ್ಕ್, ಡಿ.ಎಸ್.ಅರುಣ್, ಆಯನೂರು ಮಂಜುನಾಥ್, ಸಂಸದ ಬಿ.ವೈ.ರಾಘವೇಂದ್ರ, ಜ್ಯೋತಿಪ್ರಕಾಶ್, ಡಾ.ಧನಂಜಯ ಸರ್ಜಿ, ಮೇಯರ್ ಶಿವಕುಮಾರ್ ಇತರರಿದ್ದರು.

Exit mobile version