Site icon TUNGATARANGA

ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಅಜಾನ್ ಕೂಗು | ದೂರು ದಾಖಲು -ಎಸ್ ಪಿ ಮಿಥುನ್ ಕುಮಾರ್ ಸ್ಪಷ್ಟನೆ

.ಶಿವಮೊಗ್ಗ,ಮಾ.19:

ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿ ಎದುರು ಕಳೆದ ಮಾ.17 ರಂದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಆಜಾನ್ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಪಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮ ಸಂದೇಶ ರವಾನಿಸಿರುವ ಅವರು, ಘಟನೆ ಸಂಬಂಧ ಅಜಾನ್ ಕೂಗಿದ ಯುವಕನನ್ನ ಕರೆದು ಎಚ್ಚರಿಕೆ ನೀಡಲಾಗಿದೆ. ಹಾಗೂ ಈ ಸಂಬಂಧ ಕೇಸ್‌ವೊಂದನ್ನ ದಾಖಲಿಸಲಾಗಿದೆ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಜಾನ್ ಕುರಿತು ಶಾಸಕ ಕೆ.ಎಸ್. ಈಶ್ವರಪ್ಪನವರು ನೀಡಿದ ಹೇಳಿಕೆ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಮ್ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕಳೆದ 17 ರಂದು ನಡೆದಿದ್ದ ಪ್ರತಿಭಟನೆ ವೇಳೆ ಯುವಕನೊಬ್ಬ .
ಅಜಾನ್ ಕೂಗಿದ್ದಾನೆ. ಸದ್ಯ ಈ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ವರದಿಗಳು ಪ್ರಕಟವಾಗಿದ್ದವು ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

Exit mobile version