Site icon TUNGATARANGA

ಮಾ. 31 ರಿಂದ SSLC ಪರೀಕ್ಷೆ / ಮುಂಜಾಗೃತಾ ಕ್ರಮವಾಗಿ ಪುಲ್ ಬಂದೋಬಸ್ತ್ ಹೇಗಿದೆ ? ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ವಿವರ

ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವ ಉದ್ದೇಶದಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಇವರು ಪರೀಕ್ಷೆಗಳು

ನಡೆಯುವ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ ಫಾಸಲೆಯವರೆಗೆ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಸಿಆರ್‍ಪಿಸಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿರುತ್ತಾರೆ.


    ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಫಾಸಲೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಪರೀಕ್ಷೆ ನಡೆಯಲಿರುವ ದಿನಗಳಂದು ಪರೀಕ್ಷಾ ಕೇಂದ್ರದ

ಸುತ್ತಮುತ್ತ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ. ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಜೆರಾಕ್ಸ್, ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು ನಿರ್ಬಂಧಿಸಿದೆ. ಮೊಬೈಲ್ ಬಳಕೆಯನ್ನು ನಿರ್ಬಂಧಿಸಿ ಆದೇಶಿಸಿದ್ದಾರೆ.

Exit mobile version