ಶಿಕಾರಿಪುರದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆ ತಾರಕಕ್ಕೇರಿದ್ದು, ಒಳ ಮೀಸಲಾತಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುದನ್ನ ವಿರೋಧಿಸಿ, ಶಿಕಾರಿಪು ರದಲ್ಲಿ ಪ್ರತಿಭಟನೆ ವೇಳೆ ಮಾಜಿ ಸಿಎಂ ಬಿಎಸ್‌ವೈ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಲಾಗಿದೆ.
ತಾಲೂಕು ಬಂಜಾರ ಸಮಾಜ ವತಿಯಿಂದ ಪ್ರತಿಭಟನೆ ನಡೆದಿದ್ದು, ಒಳ ಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಮಾಜಿ ಸಿಎಂ ಬಿಎಸ್‌ವೈ ನಿವಾಸದ ಕಿಟಕಿ ಗಾಜುಗಳಿಗೆ ಕಲ್ಲು ತೂರಲಾಗಿದೆ. ಬ್ಯಾರಿಕೇಡ್ ತಳ್ಳಿ, ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲುಗಳನ್ನ ಪ್ರತಿಭಟನಾಕಾರರು ತೂರಿದ ತೂರಿದ್ದಾರೆ.
ಪೊಲೀಸರ ಸೂಚನೆ ಧಿಕ್ಕರಿಸಿ, ಏಕಾಏಕಿ ಪ್ರತಿಭಟನಾಕಾರರು ಕಲ್ಲು ತೂರಿದ್ದಾರೆ. ಉದ್ರಿಕ್ತಗೊಂಡ ಪ್ರತಿಭಟನಾಕಾರರ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಕಲ್ಲುತೂರಾಟದಿಂದ ಕೆಲ ಪೊಲೀಸ್ ಸಿಬ್ಬಂದಿಗೂ ಸಣ್ಣಪುಟ್ಟ- ಗಾಯಗಳಾಗಿವೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ- ಸಿಬ್ಬಂದಿಗಳ ರವಾನಿಸಲಾಗಿದೆ.
ಮಾಳೇರ ಕೇರಿಯಲ್ಲಿರುವ ಯಡಿಯೂರಪ್ಪ ಅವರ “ಮೈತ್ರಿ’ ನಿವಾಸ ಇದ್ದು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶಿಕಾರಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.