Site icon TUNGATARANGA

ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ  ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ / ಏ.15 ರವರೆಗೆ ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ


      ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ  ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿμÉೀಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ


    ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಏ.15 ರವರೆಗೆ ಅಂದರೆ ಹೆಚ್ಚುವರಿ ಹತ್ತು ದಿವಸುಗಳ ಕಾಲ ವಿಸ್ತರಿಸಲಾಗಿದೆ.


      ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ. ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ

ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ. ಹಾಗೂ ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.

Exit mobile version