Site icon TUNGATARANGA

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಯುವಧ್ವನಿ ಮೂಲಕ ಶ್ರಮ:ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್

ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯುವಶಕ್ತಿ ಶ್ರಮಿಸುತ್ತದೆ. ಯುವಧ್ವನಿ ಮೂಲಕ ಅಧಿಕಾರಕ್ಕೆ ಬರುತ್ತದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್ ಹೇಳಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯಲಿದೆ. ಪಕ್ಷದ ಪ್ರಣಾಳಿಕೆ ಕೂಡ ಯುವಕರಿಗೆ ಅದರಲ್ಲೂ ವಿದ್ಯಾವಂತ ಯುವಕರಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದೆ. ಮುಖ್ಯವಾಗಿ ಪದವೀ ಧರರಿಗೆ ತಿಂಗಳಿಗೆ ಮೂರು ಸಾವಿರ ಹಾಗೂ ಡಿಪ್ಲಮೋ ಪಡೆದವರಿಗೆ ತಿಂಗಳಿಗೆ ಒಂದೂವರೆ ಸಾವಿರ ಉತ್ತೇ ಜನ ಮಾಶಾಸನ ನೀಡುತ್ತದೆ ಇದು ಯುವಕರಲ್ಲಿ ಹೊಸ ಭರವಸೆ ಹುಟ್ಟಿಸಿದೆ ಎಂದರು.


ಬಿಜೆಪಿ ಸರ್ಕಾರದಲ್ಲಿ ಉದ್ಯೋಗಗಳ ಅವಕಾಶ ಗಳು ಒಂದು ಕಡೆ ಇರಲಿ. ಇರುವ ಉದ್ಯೋಗಗಳನ್ನೇ ಕಸಿದುಕೊಳ್ಳಲಾಗಿದೆ. ಯುವಕರು ಭ್ರಮಾಶೀಲ ರಾಗಿದ್ದಾರೆ. ಆತಂಕದಲ್ಲಿದ್ದಾರೆ. ಯುವಶಕ್ತಿ ದೇಶದ ಶಕ್ತಿಯಾಗಿದೆ. ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಯುವಕರನ್ನೇ ಪ್ರಮುಖವಾಗಿ ಇಟ್ಟುಕೊಂಡಿದೆ. ಅನೇಕ ಕಡೆಗಳಲ್ಲಿ ಯುವಕರಿಗೆ ಟಿಕೆಟ್ ನೀಡಿದೆ ಎಂದರು.


ಒಬ್ಬ ಸಾಮಾನ್ಯಕಾರ್ಯರ್ತನಿಗೂ ಕಾಂಗ್ರೆಸ್‌ನಲ್ಲಿ ಸ್ಥಾನಮಾನ ನೀಡಲಾಗಿದೆ. ಇದಕ್ಕೆ ಉದಾಹರಣೆ ಎಂದರೆ ನಾವುಗಳೇ. ಹಾಗಾಗಿ ಈ ಬಾರಿಯ ಚುನಾವಣೆಯನ್ನು ಯುವಶಕ್ತಿ ಸವಾಲಾಗಿ ತೆಗೆದುಕೊಂಡಿದೆ. ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೂಲಕ ಯುವಕರಲ್ಲಿ ಹೊಸ ಭರವಸೆಯನ್ನು ನಾವು ಮೂಡಿಸುತ್ತೇವೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ಪ್ರಮುಖರಾದ ಎಸ್. ಕುಮರೇಶ್, ಆರ್ ಕಿರಣ್, ಟಿ.ವಿ. ರಂಜಿತ್, ಎನ್. ರಾಹುಲ್, ಇಮ್ರಾನ್ ಖಾನ್, ನದೀಮ್, ಆದಿಲ್ ಭಾಷಾ, ಸುಹಾಸ್ ಗೌಡ ಮತ್ತಿತರರಿದ್ದರು.

Exit mobile version