Site icon TUNGATARANGA

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕರ್ತವ್ಯ ನಿರ್ವಹಿಸಿ / ಚುನಾವಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ

ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾ ವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾ ಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಹಾಗೂ ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯನಿರ್ವಹಿ ಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲಾಡಳಿತ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಸಿದ್ದತೆ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.


ಎಲ್ಲ ಚುನಾವಣಾಧಿಕಾರಿಗಳು ಮತಗಟ್ಟೆ ಗಳಿಗೆ ತೆರಳಿ ಮತಗಟ್ಟೆಗಳ ಕುರಿತು ಖಾತ್ರಿಪಡಿ ಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಕುರಿತು ಈಗಲೇ ಸಮರ್ಪಕವಾದ ಯೋಜನೆ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು. ಪ್ರತಿ ಮತಗಟ್ಟೆಗೆ ಪಂಚಾಯಿತಿ ಅಥವಾ ಇತರೆ ಸ್ಥಳೀಯ ಸಂಸ್ಥೆಗಳಿಂದ ಒಬ್ಬರನ್ನು ನಿಯೋಜಿ ಸಬೇಕು. ಇಓ, ಚೀಫ್ ಆಫೀಸರ್, ಪಿಡಿಓ ಗಳು ಮತಗಟ್ಟೆಗಳು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ/ಸಿಬ್ಬಂದಿಗಳ ಎಲ್ಲ ರೀತಿಯ ಮೂಲಭೂತ ವ್ಯವಸ್ಥೆಗಳ ಕುರಿತು ನಿಗಾ ವಹಿಸಿ, ಮುತು ವರ್ಜಿಯಿಂದ ವ್ಯವಸ್ಥೆ ಮಾಡಬೇಕು.


ಇಓ, ಚೀಫ್ ಆಫೀಸರ್, ಪಿಡಿಓ ಗಳು ಎಲ್ಲ ಮತಗಟ್ಟೆಗಳಲ್ಲಿ ಎಎಂಎಫ್ (ಅಶ್ಯೂ ರಡ್ ಮಿನಿಮಮ್ ಫೆಸಿಲಿಟಿಸ್) ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು. ಹಾಗೂ ಚುನಾವಣಾಧಿಕಾರಿಗಳು ಪೋಸ್ಟಲ್ ಬ್ಯಾಲಟ್ ಬಗ್ಗೆ ಅತ್ಯಂತ ಸೂಕ್ಷ್ಮವಾಗಿ ಕಾರ್ಯ ನಿರ್ವಹಿಸಬೇಕೆಂದರು.
ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ತಯಾ ರಿಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು.

ನಾಮಪತ್ರ ಸ್ವೀಕರಿಸುವ ಕುರಿತು ಚುನಾವಣಾ ಧಿಕಾರಿಗಳು ನಿಯಮಗಳು, ಮಾರ್ಗಸೂಚಿ ಗಳನ್ನು ಮತ್ತೊಮ್ಮೆ ಓದಿ, ತಿಳಿದುಕೊಂಡು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಬೇಕು. ಮಸ್ಟರಿಂಗ್ ಕೇಂದ್ರಗಳು ಹಾಗೂ ಇದಕ್ಕೆ ಸಂ ಬಂಧಿಸಿದ ಸಿಬ್ಬಂದಿಗಳು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.


ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್, ಅಪರ ಜಿಲ್ಲಾ ಧಿಕಾರಿ ಎಸ್.ಎಸ್.ಬಿರಾದರ್, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.

Exit mobile version