ಇಂದು ಅಥವಾ ನಾಳೆ ಸಭೆ ಸೇರುತ್ತೇವೆ. ಸಭೆಯಲ್ಲಿ ಚರ್ಚೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೈಪೆÇೀಟಿ ಜಾಸ್ತಿ ಇದ್ದಾಗ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ವರಿಷ್ಠರೊಂದಿಗೆ ಚರ್ಚೆ ನಡೆಸಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು ಎಂದರು.
ಕಾಂಗ್ರೆಸ್‍ಗೆ ಸುಮಾರು 60 ಕ್ಷೇತ್ರದಲ್ಲಿ ಸರಿಯಾದ ಅಭ್ಯರ್ಥಿ ಇಲ್ಲವಾಗಿದೆ. ಹೀಗಾಗಿ ನಮ್ಮ ಪಕ್ಷದವರಿಗೆ ಕರೆ ಮಾಡಿ ನಿಮ್ಮ ಸಲುವಾಗಿ ಕಾಯ್ದಿರಿಸಿದ್ದೇವೆ ಪಕ್ಷಕ್ಕೆ ಬರುತ್ತೀರಾ ಎಂದು ಕರೆಯುತ್ತಿದ್ದಾರೆ. ಆದರೆ ಬಿಜೆಪಿಯಿಂದ ಯಾವೊಬ್ಬ ನಾಯಕರೂ ಕಾಂಗ್ರೆಸ್‍ಗೆ ಹೋಗುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ನವರು ಬಹಳ ಹೀನಾಯವಾಗಿ ಸೋಲುತ್ತಾರೆ ಎಂದು ಭವಿಷ್ಯ ನುಡಿದರು.
ಕೇವಲ ಉಡಾಫೆ ಮಾಡಿಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಕಾಂಗ್ರೆಸ್‍ನವರು ಹೇಳುತ್ತಿದ್ದಾರೆ. ಅವರಲ್ಲಿ ಬಣ ರಾಜಕೀಯ ಇರುವುದು ಎಲ್ಲರಿಗೂ ಗೊತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದರು.
ಕೆ.ಎನ್. ರಾಜಣ್ಣ ನಟ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆಯುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಲ್ಲರೂ ಅವರನ್ನು ಕರೆಯುತ್ತಾರೆ, ಹೋಗೋದು ಬಿಡೋದು ಅವರಿಗೆ ಬಿಟ್ಟ ವಿಚಾರ. ಸುದೀಪ್ ಅವರೇ ಹೇಳಿದ್ದಾರೆ ನನ್ನ ಕಷ್ಟ ಕಾಲದಲ್ಲಿ ಯಾರು ಕೈಹಿಡಿಯಲಿಲ್ಲ. ಬೊಮ್ಮಾಯಿ ಕೈಹಿಡಿದಿದ್ದರು ಸಹಾಯ ಮಾಡ್ತೀನಿ ಎಂದಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸುದೀಪ್ ಗೆ ಬೆದರಿಕೆ ಪತ್ರ ಬಂದ ಬಳಿಕವೇ ಅವರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಕೃತಿ ಈಗಾಗಲೇ ದೂರು ದಾಖಲಾಗಿದ್ದು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಕುಮಟಳ್ಳಿ ಸೋಲಿನ ಕುರಿತು ಲಕ್ಷಣ ಸವದಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸವದಿ ಜೊತೆ ಮಾತನಾಡಿದ್ದೇನೆ. ಅವರು ಡಿಸಿಎಂ ಆಗಿದ್ದವರು, ಎಲ್ಲವೂ ಅರ್ಥ ಆಗುತ್ತದೆ. ಸವದಿ ಕೂಡ ಪಕ್ಷದ ಹಿರಿಯ ನಾಯಕರು. ಅವರಿಗೂ ಜವಾಬ್ದಾರಿ ಇದೆ ಎಂದು ಹೇಳಿದರು.