Site icon TUNGATARANGA

ಏ.13 ರಿಂದ ನಾಮಪತ್ರ ಸ್ವೀಕಾರ/ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಚುನಾವಣೆ ಬಗ್ಗೆ ಸಂಪೂರ್ಣ ವಿವರ

ಶಿವಮೊಗ್ಗ ವಿಧಾನಸಭಾ ಕ್ಷೇತ್ರ-೧೧೩ ರಲ್ಲಿ ೧೨೬೫೬೮ ಪುರುಷ, ೧೩೨೩೩೪ ಮಹಿಳೆ ಮತ್ತು ೧೪ ತೃತೀಯ ಲಿಂಗಿ ಸೇರಿದಂತೆ ಒಟ್ಟು ೨೫೮೯೧೬ ಮತದಾರರಿದ್ದಾರೆ. ದಿನಾಂಕ: ೧೩-೦೪-೨೦೨೩ ರಿಂದ ನಾಮಪತ್ರಗಳನ್ನು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ತಿಳಿಸಿದರು.


ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೊಷ್ಟಿಯಲ್ಲಿ ಅವರು ಮಾಹಿತಿ ನೀಡಿ, ೧೧೩ ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ದಂತೆ ಚುನಾವಣಾ ಅಧಿಸೂಚನೆಯನ್ನು ದಿನಾಂಕ ಏ.೧೩ರಿಂದ (ಗುರುವಾರ) ರಂದು ಹೊರಡಿಸಲಾಗುತ್ತದೆ. ಏ.೨೦ರವರೆಗೆ ನಿಯ ಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು.
ಹೆಚ್ಚುವರಿ ಮತದಾನ ಕೇಂದ್ರಗಳು :೧೧೩ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ೨೮೬ ಮತದಾನ ಕೇಂದ್ರಗಳಿದ್ದು, ೮ ಹೆಚ್ಚು ವರಿ ಮತದಾನ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ. ಆಯೋಗದಿಂದ ಅನುಮತಿ ದೊರೆತ ನಂತರದಲ್ಲಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳ ಲಾಗುತ್ತದೆ.


ಮತದಾರರ ಪಟ್ಟಿ: ಅಂತಿಮ ಮತದಾ ರರ ಪಟ್ಟಿಯನ್ನು ದಿನಾಂಕ: ಮೇ.೦೫ ರಂದು ಪ್ರಕಟಿಸಲಾಗಿರುತ್ತದೆ. ಹಾಗೂ ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ರಾಷ್ಟ್ರದ ಮತ್ತು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ನಿರ್ದೇಶನುಸಾರ ನೀಡಲಾಗಿದೆ. ಮತದಾರರ ಪಟ್ಟಿಯ ಪೂರಕ ಪಟ್ಟಿಗಳನ್ನು ಭಾರತ ಚುನಾವಣೆ ಆಯೋಗದ ನಿರ್ದೇಶ ನುಸಾರ ಒದಗಿಸಲು ಕ್ರಮ ಕೈಗೊಳ್ಳಲಾ ಗುವುದು. ಮತದಾರರಿಗೆ ಗುರುತಿನ ಚೀಟಿ ವಿತರಣೆ: ದಿನಾಂಕ ೦೫-೦೧-೨೦೨೨ರ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ನಂತರದಲ್ಲಿ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈವರೆಗೆ ಸುಮಾರು ೧೦,೦೯೦ ಮತದಾರರ ಗುರುತಿನ ಚೀಟಿಗಳನ್ನು ಸ್ಪೀಡ್ ಪೊಸ್ಟ್ ಮೂಲಕ ಮತದಾರರಿಗೆ ರವಾನಿಸಿದೆ.


ಮತದಾರರ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ದಿನಾಂಕ: ೧೧-೦೪-೨೦೨೩ ಅಂತಿಮ ದಿನವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟ ರುಗಳ ಪಟ್ಟಿ: ಭಾರತೀಯ ಜನತಾ ಪಾರ್ಟಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿಯನ್ನು ನೀಡಿದ್ದಾರೆ. ಜನತಾದಳ ಜಾತ್ಯಾತೀತ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿಯನ್ನು ನೀಡಬೇಕಾಗಿದೆ.


ಮಾದರಿ ನೀತಿ ಸಂಹಿತೆ: ಭಾರತ ಚುನಾವಣಾ ಆಯೋಗ ನವದೆಹಲಿ ಇವರ ಪತ್ರಿಕಾ ಪ್ರಕಟಣೆಯಂತೆ ಮಾದರಿ ನೀತಿ ಸಂಹಿತೆಯು ಜಾರಿಗೆ ಬಂದಿರುತ್ತದೆ ವರೆಗೆ ಜಾರಿಯಲ್ಲಿರುತ್ತದೆ. ಕೆ.ವಿ ನಾಗರಾಜ್ ರವರು ೧೧೦-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮಾದರಿನೀತಿ ಸಂಹಿತೆಯ ನೋಡಲ್ ಅಧಿಕಾರಿಯಾಗಿರುತ್ತಾರೆ ಮೊ. ೯೪೪೮೦೪೭೪೩


ಅಂಚೆ ಮತಪತ್ರ ವಿತರಣೆ: ೮೦ ವರ್ಷ ವಯೋಮಾನ ಮೀರಿದವರು, ವಿಕಲಚೇ ತನರು ಮತ್ತು ಕೋಡ್ ೧೯ ಬಾಧಿತ ಮತದಾರರಿಗೆ ಅಂಚೆ ಮೂಲಕ ಮತದಾನ ಮಾಡಲು ಭಾರತ ಚುನಾವಣಾ ಆಯೋಗವು ಅವಕಾಶವನ್ನು ಕಲ್ಪಿಸಿದೆ. ಸದರಿ ವ್ಯಕ್ತಿಗಳು ಮತದಾನ ಮಾಡುವ ಪ್ರಕ್ರಿಯೆಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ವೀಕ್ಷಿಸಲು ಅವಕಾಶವಿದೆ.


ವಿದ್ಯುನ್ಮಾನ ಮತ ಯಂತ್ರಗಳು: ೧೧೩ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಗಳು ಬ್ಯಾಲೆಟ್ ಯುನಿಟ್-೩೩೯, ಕಂಟ್ರೋಲ್ ಯುನಿಟ್-೩೩೯, ವಿವಿಪ್ಯಾಟ್-೦೬೭ ಸರಬರಾಜು ಮಾಡಿದ್ದು ಸುರಕ್ಷಿತೆಗಾಗಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಮತ್ತೂರ್ ರಸ್ತೆ, ಶಿವಮೊಗ್ಗ ಇಲ್ಲಿ ಭದ್ರತಾ ಕೊಠಡಿಯನ್ನು ನಿರ್ಮಿಸಿ ಭದ್ರತಾ ಕೊಠಡಿಯಲ್ಲಿ ಇರಿಸಿ ಪೊಲೀಸ್ ವಶಕ್ಕೆ ನೀಡಲಾಗಿದೆ.
ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಮತ್ತೂರ್ ರಸ್ತೆ, ಶಿವಮೊಗ್ಗ ಇಲ್ಲಿ ಮಸ್ಟರಿಂಗ್ ಕಾರ್ಯವನ್ನು ದಿನಾಂಕ: ೦೯-೦೫-೨೦೨೨ ರಂದು ಮತ್ತು ಡಿ ಮಸ್ಟರಿಂಗ್ ಕಾರ್ಯವನ್ನು ದಿನಾಂಕ: ೧೦- ೦೫-೨೦೨೨ ರಂದು ನಿರ್ವಹಿಸಲಾಗುತ್ತದೆ. (ಮುಕ್ತಾಯ ವಾಗುವವರೆಗೆ) ಹಾಗೂ ನಂತರದಲ್ಲಿ ಜಿಲ್ಲಾ ಭದ್ರತಾ ಕೊಠಡಿಗೆ ರವಾನಿಸಲಾಗುತ್ತದೆ.
ಮತದಾರರ ಪಟ್ಟಿಯಲ್ಲಿ ನೋಂದಾಯಿ ಸಲ್ಪಟ್ಟ ಮತದಾರರಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ವೋಟರ್ ಸ್ಲಿಪ್‌ನ್ನು ವಿತರಿಸುತ್ತಾರೆ.
ಡಿವೈಎಸ್‌ಪಿ ಬಾಲರಾಜ್ ಮಾತನಾಡಿ, ನಾಮಪತ್ರ ಸಲ್ಲಿಕೆ ಆರಂಭ ದಿನಾಂಕದಿಂದ ಅಂತಿಮ ದಿನದವರೆಗೆ ಪಾಲಿಕೆ ಹಿಂದಿನ ಗೇಟ್‌ನ್ನು ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗುವುದು, ಪಾಲಿಕೆಯ ಇನ್ನೊಂದು ಗೇಟ್‌ನಿಂದ ಪ್ರವೇಶಿಸಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್ ಇದ್ದರು.

Exit mobile version