ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಆಕಾಂಕ್ಷಿ ಯಾಗಿದ್ದ ಜಿ. ಪಲ್ಲವಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡದೆ ಇರುವುದು ತುಂಬಾ ಬೇಸರ ತಂದಿದ್ದು, ಮುಂದಿನ ನಡೆಯ ಬಗ್ಗೆ ಒಂದೆರಡು ದಿನ ದಲ್ಲಿಯೇ ತೀರ್ಮಾನ ತೆಗೆದು ಕೊಳ್ಳುತ್ತೇವೆ ಎಂದು ಗ್ರಾಮಾಂತರ ಕ್ಷೇತ್ರದ ವಿವಿಧ ಸಮುದಾಯದ ಕಾಂಗ್ರೆಸ್ ಮುಖಂಡರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿ. ಪಲ್ಲವಿ ಅವರು ೨೦೧೮ ರಲ್ಲಿಯೂ ಟಿಕೆಟ್ ಆಕಾಂಕ್ಷಿ ಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನಪಡಿಸಿ ಈ ಬಾರಿ ಬೇರೆಯವರಿಗೆ ಅವಕಾಶ ಕೊಡಿ. ಮುಂದಿನ ಬಾರಿ ನಿಮಗೆ ಟಿಕೆಟ್ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಭರವಸೆ ಈಗ ಹುಸಿಯಾಗಿದೆ. ಕಳೆದ ಚುನಾವಣೆಯಲ್ಲಿ ಹೀನಾಯ ವಾಗಿ ಸೋತ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ. ಇದು ಖಂಡನೀಯ ಎಂದು ಚೋರಡಿ ಗ್ರಾ.ಪಂ.ಸದಸ್ಯ ರಾಜೇಶ್ ತಿಳಿಸಿದರು.
ಜಿ. ಪಲ್ಲವಿ ಅವರು, ಸಮಾಜ ಮುಖಿ ಕೆಲಸ ಮಾಡಿದ್ದಾರೆ. ಕ್ಷೇತ್ರ ದಲ್ಲಿ ಪಾದರಸದಂತೆ ಒಡಾಡು ತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಇಂತವರನ್ನು ಬಿಟ್ಟು ಏನೂ ಕೆಲಸ ಮಾಡದ ವ್ಯಕ್ತಿಗೆ ಟಿಕೆಟ್ ನೀಡಿದ್ದಾರೆ. ಕಳೆದ ೨೦ ವರ್ಷಗಳಿಂದ ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಈ ಬಾರಿ ಕಾಂಗ್ರೆಸ್‌ಗೆ ಗೆಲ್ಲುವ ಅವಕಾಶವಿದೆ. ಆದರೆ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ಈಗಲೂ ಕಾಲ ಮಿಂಚಿಲ್ಲ. ಜಿ. ಪಲ್ಲವಿಗೆ ಬಿ-ಫಾರಂ ನೀಡುವ ಮೂಲಕ ತನ್ನ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಬದಲಿಸ ಬೇಕು ಎಂದು ಒತ್ತಾಯಿಸಿದರು.
ಮತ್ತೊಬ್ಬ ಮುಖಂಡ ಕೆಪಿಸಿಸಿ ಸಂಚಾಲಕ ಬಿ.ಸಿ. ನಾಗರಾಜ್ ಮಾತನಾಡಿ, ಪಲ್ಲವಿಯವರಿಗೆ ಟಿಕೆಟ್ ಸಿಗದಿದ್ದರೆ ಮುಂದಿನ ನಿರ್ಧಾರವನ್ನು ನಾವು ತೆಗೆದುಕೊಳ್ಳಬೇಕಾಗುತ್ತದೆ. ೧೯ನೇ ತಾರೀಖಿ ನೊಳಗಾಗಿ ಪಲ್ಲವಿಯ ವರೊಂದಿಗೆ ಮಾತನಾಡಿ, ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಮಹೇಶ್ ಹಾರನಹಳ್ಳಿ, ಮಂಜುನಾಥ್, ಸಂತೋಷ್, ನಿರಂಜನ, ನಾಗಪ್ಪ, ರಮೇಶ್, ಬೆಟ್ಟದಳ್ಳಿ ಪ್ರಕಾಶ್, ಶಿವಣ್ಣ, ಅವಿ ನಾಶ್, ಬಸವರಾಜು ಮುಂತಾದ ವರಿದ್ದರು.