Site icon TUNGATARANGA

ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ | ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಲೇವಡಿ


ಶಿವಮೊಗ್ಗ : ರಾಜ್ಯದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆ ಬಹಳ ಮಹತ್ವದ ಚುನಾವಣೆ. ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.


ಅವರು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, ಗ್ಯಾಸ್ ಸಿಲಿಂಡರ್, ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆ ಕಂಡಿದೆ. ಅವಶ್ಯಕ ವಸ್ತುಗಳ ಬೆಲೆ ಏರಿಕೆ ಕಂಡಿವೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆ ಮಾಡಲು ಏನು ಮಾಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.


ರಾಜ್ಯದಲ್ಲಿ ೨,೫೦,೦೦೦ ಸರ್ಕಾರಿ ಉದ್ಯೋಗಗಳು ಖಾಲಿ ಇವೆ. ಕೇಂದ್ರ ಸರ್ಕಾರದಲ್ಲಿ ೩೦ ಲP ಉದ್ಯೋಗ ಖಾಲಿ ಇವೆ ಅದನ್ನು ತುಂಬುತ್ತಿಲ್ಲ. ಆದರೆ, ರಾಜ್ಯದಲ್ಲಿ ಯುವ ನಿಧಿ, ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಅನ್ನು ಗ್ಯಾರೆಂಟಿಯಾಗಿ ನೀಡಿzವೆ. ಇದನ್ನೂ ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ, ಬಜೆಟ್ ನೋಡಿಕೊಂಡೇ ಯಾವ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವೋ ಅದನ್ನೇ ನಾವು ಈಡೇರಿಸುವ ಭರವಸೆಗಳನ್ನು ನೀಡಿದ್ದೇವ ಎಂದರು.


ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆದಿದೆ. ಶಿPಕರ ನೇಮಕಾತಿಯಲ್ಲಿ ಹಗರಣ ಆಗಿದೆ. ಯಾವುದೇ ಒಂದು ದೊಡ್ಡ ಯೋಜನೆ, ಮೋದಿಯವರ ಕಾಲದಲ್ಲಿ ಕರ್ನಾಟಕದಲ್ಲಿ ಆಗಿಲ್ಲ. ಮೋದಿ ಅವರ ಕಾಲದಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ಆಗದಿದ್ದರೂ ನಮ್ಮ ವಿರುದ್ಧ ಮಾತನಾಡುತ್ತಾರೆ ಎಂದರು.
ನಮ್ಮದು ಭಷ್ಟಾಚಾರ ಸರ್ಕಾರ ಎಂದು ಮೋದಿ ಹೇಳುತ್ತಾರೆ. ಆದರೆ, ಬಿಜೆಪಿ ಸರ್ಕಾರದ ೪೦ ಪರ್ಸೆಂಟ್ ಕಮಿಷನ್ ಬಗ್ಗೆ ಗುತ್ತಿಗೆದಾರರೇ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದರೂ ಅದಕ್ಕೆ ಉತ್ತರವೇ ಇಲ್ಲ. ನಾಗರಿಕರೇ ಬಿಜೆಪಿ ಸರ್ಕಾರ ಭ್ರಷ್ಟಚಾರ ಬಗ್ಗೆ ಹೇಳಿದರೂ ಮೋದಿ ಅದು ಗೊತ್ತಾಗಿಲ್ಲ ಎಂದು ಟೀಕಿಸಿದರು.


ನರೇಂದ್ರ ಮೋದಿ ಅವರಿಗೆ ೯೧ ಬಾರಿ ಯಾವಾಗ ಬೈದಿzರೋ ನನಗಂತೂ ಗೊತ್ತಿಲ್ಲ. ಪ್ರಧಾನಿ ಮೋದಿ ಸಿಂಪತಿ ಗಳಿಸಲು ಬೈದಿರುವುದನ್ನು ಮತ್ತೆ ಮತ್ತೆ ಹೇಳುತ್ತಿದ್ದಾರೆ. ಆದರೆ, ಅವರು ಎಷ್ಟು ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೈದಿದ್ದಾರೆ, ನೆಹರು ಅವರಿಗೆ ಅವಮಾನ ಮಾಡಿದ್ದಾರೆ. ಅದೆಲ್ಲ ಲೆಕ್ಕಕ್ಕಿಲ್ಲ ಎಂದು ಕುಟುಕಿದರು.


ಎಲ್ಲಿ ಹಿಂದುಳಿದ ವರ್ಗದವರು ಇರುತ್ತಾರೋ ಅಲ್ಲಿ ಅಂಬೇಡ್ಕರ್ ವಿಷಯ ಪ್ರಸ್ತಾಪಿಸುತ್ತಾರೆ. ಕಾಂಗ್ರೆಸ್‌ನವರು ಅಂಬೇಡ್ಕರ್ ಅವರನ್ನು ಅವಮಾನ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸಂವಿಧಾನ ಕರಡು ಸಮಿತಿಗೆ ತನ್ನನ್ನು ಅಧ್ಯPರನ್ನಾಗಿ ಮಾಡಿದ್ದಕ್ಕೆ ಕಾಂಗ್ರೆಸ್ಸನ್ನು ಅಂಬೇಡ್ಕರ್ ಹೊಗಳಿzರೆ. ಸಂವಿಧಾನ ಕರಡು ಸಮಿತಿಯನ್ನು ಅಂಬೇಡ್ಕರ್ ಅವರು ಇದನ್ನು ನಿರ್ವಹಿಸಬೇಕಾಗಿತ್ತು. ಆದರೆ, ಅಂಬೇಡ್ಕರ್ ಬರೆದ ಸಂವಿಧಾನ ಸರಿ ಇಲ್ಲ ಎಂದು ಆರ್‌ಎಸ್‌ಎಸ್ ವಿರೋಸಿದ್ದರು ಇದು ಮೋದಿಯವರಿಗೆ ಗೊತ್ತಿಲ್ಲವಾ? ಸಂವಿಧಾನವೇ ಬದಲಿಸುತ್ತೇವೆ ಎಂದವರು ಈಗ ಹಿಂದುಳಿದ ವರ್ಗಗಳ ಮತಗಳನ್ನು ಸೆಳೆಯಲು ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನ ಮಾಡಿದೆ ಎಂದು ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಎಚ್.ಸಿ.ಯೋಗೀಶ್, ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ.ಶ್ರೀನಿವಾಸ್ ಕರಿಯಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮತ್ತಿತರರು ಇದ್ದರು.


ಬಾಕ್ಸ್


(-ಟೋ: ಮಲ್ಲಿಕಾರ್ಜುನ ಖರ್ಗೆ)



Exit mobile version