Site icon TUNGATARANGA

ಭದ್ರಾವತಿ/ ಅಪ್ರಾಪ್ತೆ ಮೇಲೆ ಅತ್ಯಾಚಾರ- ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ


ಭದ್ರಾವತಿ,ಮೇ.3:
ಕಳೆದ 2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬನು, 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.


ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಮಂಜುನಾಥ್, ಈ.ಓ, ಸಿಪಿಐ, ಭದ್ರಾವತಿ ಗ್ರಾಮಾಂತರ ವೃತ್ತರವರರು ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. ಪ್ರಕರಣದಲ್ಲಿ ದಿವಾಕರ್ ರಾವ್, ಎಎಸ್ಐ, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ರವರು ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.


ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು* ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, *The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರು ದಿನಾಂಕ: 02-05-2023ರಂದು ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.

Exit mobile version