Site icon TUNGATARANGA

ವಿದ್ಯಾಗಮಕ್ಕೆ ಬ್ರೇಕ್ ಓಕೆ…? ಶಿಕ್ಷಕರಿಗೆ ಕೋವಿಡ್ ಚೆಕಪ್ ಯಾಕೆ…?

ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ
ಬೆಂಗಳೂರು, ಅ.10:
ರಾಜ್ಯದಲ್ಲಿ ಜಾರಿಗೆ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವು ದರಿಂದ ವಿದ್ಯಾಗಮ ಕಾರ್ಯಕ್ರ ಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾ ಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿ ದ್ದಾರೆ.
ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯ ಕ್ರಮ. ಆದರೂ ವಿವಿಧ ವಲಯ ಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ವಿದ್ಯಾಗಮದ ನೋಟ

ಶಿಕ್ಷಕರು ಕೋವಿಡ್ ತಪಾಸಣೆ ಮಾಡಿಸಿಕೊಳ್ಳಲು ಸೂಚನೆ
ವಿದ್ಯಾಗಮ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸುತ್ತೊಲೆ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ವಿದ್ಯಾಗಮ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ಆದರೆ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಮತ್ತು ಜಿಲ್ಲೆಯ ಕೆಲವು ಶಿಕ್ಷಕರು ಕೂಡ ಸೋಂಕಿಗೆ ಒಳಗಾಗಿರುವುದು ದುಖಃಕರ ವಿಷಯವಾಗಿದೆ. ಆದರೆ ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ಹರಡಿರುವುದಿಲ್ಲ. ಇದು ಸಮಾಧಾನದ ವಿಷಯವಾಗಿದೆ.
ಆದ್ದರಿಂದ ಜಿಲ್ಲೆಯ ಎಲ್ಲ ಶಾಲೆಗಳ ಶಿಕ್ಷಕರುಗಳು ಕಡ್ಡಾಯವಾಗಿ ಅ.17 ರೊಳಗಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಪಾಸಿಟಿವ್ ಬಂದವರು ಯಾವುದೇ ಕಾರಣಕ್ಕೂ ವಿದ್ಯಾಗಮ ಯೋಜನೆಯಲ್ಲಿ ಭಾಗವಹಿಸಬಾರದು ಅವರು ಕಡ್ಡಾಯವಾಗಿ ಸರ್ಕಾರದ ನಿಯಮದಂತೆ ಕ್ವಾರಂಟೈನ್‌ಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆದು ನೆಗೆಟಿವ್ ವರದಿ ಬಂದ ನಂತರವೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಈ ಆದೇಶಕ್ಕೆ ಹಲವು ಶಿಕ್ಷಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೇನೋ ಪರೀಕ್ಷೆ ಮಾಡಿಸುವುದು ಸರಿ. ಆದರೆ ಎಷ್ಟು ಮಕ್ಕಳಿಗೆ ಎಂದು ಪರೀಕ್ಷೆ ಮಾಡಲಾಗುತ್ತದೆ. ಆ ಮನೆಯ ಎಲ್ಲರಿಗೂ ಪರೀಕ್ಷೆ ಮಾಡಿಸಬೇಕಾಗಬಹುದು. ಅಕ್ಕಪಕ್ಕದವರಿಗೂ ಪರೀಕ್ಷೆ ಮಾಡಿಸಬೇಕಾಗುತ್ತದೆ ಮತ್ತು ಇದೇ ನಿಯಮ ಶಿಕ್ಷಕರಿಗೂ ಅನ್ವಯಿಸುತ್ತದೆ. ಶಿಕ್ಷಕರು ಕೂಡ ತಮ್ಮ ಮನೆಯಲ್ಲಿರುವ ಅಕ್ಕಪಕ್ಕದಲ್ಲಿರುವ ಎಲ್ಲರನ್ನು ಪರೀಕ್ಷೆಗೆ ಒಳಪಡಿ ಬೇಕಾಗುತ್ತದೆ. ಆದ್ದರಿಂದ ವಿದ್ಯಾಗಮ ಯೋಜನೆ ಬಗ್ಗೆಯೇ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಎಂದು ಹಲವು ಶಿಕ್ಷಕರು ತಿಳಿಸಿದ್ದಾರೆ.

Exit mobile version