Site icon TUNGATARANGA

ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇದ| ಮಾರ್ಗ ಬದಲಾವಣೆ

ನಾಳೆ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ, ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಠಿಯಿಂದ ವಾಹನಗಳ ಸಂಚಾರಕ್ಕೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.


೧. ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ ೧೦೦ ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇದಿಸಲಾಗಿದೆ.
೨. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ನ ವರೆಗೆ ಸಾರ್ವಜನಿಕರ ವಾಹನಗಳು ಓಡಾಡದಂತೆ ನಿಷೇದಿಸಿದೆ.

.


೩. ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ಸುಗಳು ಹಾಗೂ ಕಾರು ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
೪. ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ಸುಗಳು ಬಿ.ಹೆಚ್ ರಸ್ತೆ ಮಾರ್ಗವಾಗಿ ಬಸ್ಟಾಂಡ್ ಗೆ ಹೋಗುವುದು.


೫. ಹೊನ್ನಾಳಿ ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನಗಳು, ಎಲ್ಲಾ ಬಸ್ ಗಳನ್ನು ವಿನೋಬನಗರ ೧೦೦ ಅಡಿ ರಸ್ತೆ ಮಾರ್ಗವಾಗಿ ಹೋಗುವುದು.
೬. ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್ ಗಳು ಎ.ಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಹೋಗುವುದು.


೭. ಕೆಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ ದಿಂದ ಬೆಂಗಳೂರು ಭದ್ರಾವತಿ ಎನ್.ಆರ್ ಪುರ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.


೮. ಏಜೆಂಟರು ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳ ವಾಹನಗಳನ್ನು ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಸಾರ್ವಜನಿಕರ ಕಾರುಗಳು ಮತ್ತು ದ್ವಿ ಚಕ್ರ ವಾಹನಗಳನ್ನು ಮಾತ್ರ ಎಂ.ಆರ್.ಎಸ್ ನಿಂದ ಎನ್.ಆರ್ ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಮಾಡುವುದು. ಸಾರ್ವಜನಿಕರ ಎಲ್ಲಾ ತರದ ವಾಹನಗಳನ್ನು ಎಂ.ಆರ್.ಎಸ್. ಸರ್ಕಲ್ ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ಮತ್ತು ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಪಾರ್ಕಿಂಗ್ ಮಾಡುವುದು.

Exit mobile version