Site icon TUNGATARANGA

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ | ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ | ಮೇ.20 ರಂದು ಪ್ರಮಾಣ ವಚನ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿದ್ದರಾ ಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಹಾಗೂ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯ ಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಇಂದು ನವದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಜಂಟಿ ಪತ್ರಿಕಾಗೋಷ್ಠಿ ಯಲ್ಲಿ ಘೋಷಿಸಿದ್ದಾರೆ.


ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಮೇ ೨೦ರಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ ಅವರ ದೆಹಲಿಯ ನಿವಾ ಸದಲ್ಲಿ ಸಿಎಂ ಆಯ್ಕೆ ಕಗ್ಗಂಟು ತೀರಿದ ಬಳಿಕ

ಇಬ್ಬರ ಕೈಗಳನ್ನು ಮೇಲೆತ್ತಿ ಹಿಡಿದು ಒಗ್ಗಟ್ಟು ಪ್ರದರ್ಶನ ಮಾಡಿದರು. ಜನರ ಆಶೋತ್ತರಗಳಿಗೆ ಸ್ಪಂದಿಸುವ ಸರ್ಕಾರವನ್ನು ನೀಡುವುದಾಗಿ ಎಐಸಿಸಿ ಅಧ್ಯಕ್ಷರು ಹೇಳಿದ್ದರು.


ಡಿ. ದೇವರಾಜ ಅರಸು ನಂತರ ಮುಖ್ಯಮಂತ್ರಿ ಯಾಗಿ ೫ ವರ್ಷ ಅವಧಿ ಪೂರ್ಣಗೊಳಿಸಿದ ಏಕೈಕ ಮುಖ್ಯಮಂತ್ರಿ ಇವರಾಗಿದ್ದಾರೆ.

Exit mobile version