ಶಿವಮೊಗ್ಗ: ಮೇ 20 ರ ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ೨೪ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಜಿಲ್ಲೆಯಿಂದಲೂ ಕೂಡ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,
ಅಭಿಮಾನಿಗಳು ಭಾಗವಹಿಸಬೇಕು ಎಂದು ಕಾಂಗ್ರೆಸ್‌ನ ಪರಿಶಿಷ್ಟ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್. ಸಿದ್ದಪ್ಪ ಹಾಗೂ ಬಿ.ಸಿ. ನಾಗರಾಜ್ ಕರೆನೀಡಿದ್ದಾರೆ.
ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬಹುಮತ ದೊರಕಿದ್ದು, ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಗೆ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಲ್ಲದೆ ಶಿವಮೊಗ್ಗ ಜಿಲ್ಲೆಯಿಂದ ಗೆದ್ದ ಶಾಸಕರಿಗೂ ಕೂಡ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಹಾಗಾಗಿ ಈ ಅಭೂತಪೂರ್ವ ಸಮಾರಂಭಕ್ಕೆ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಕೋರಿದ್ದಾರೆ