Site icon TUNGATARANGA

ನನ್ನ ಮತ ಮಾರಾಟಕ್ಕಿಲ್ಲ ಅಭಿಯಾನ ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಬಾಲರಾಜ್ ರವರಿಂದ ಸ್ವಯಂ ಸೇವಕರಿಗೆ ಅಭಿನಂದನೆ

ಮುಖ್ಯ ಅತಿಥಿ

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78ರಷ್ಟು ಮತದಾನ ಆಗುವ ಮೂಲಕ ಈವರೆಗಿನ ಅತ್ಯಧಿಕ ಮತದಾನ ನಡೆದಿದೆ. ಮತದಾನ ಜಾಗೃತಿಯಲ್ಲಿ ಕೆಲಸ ಮಾಡಿದ ಎಲ್ಲ ಸ್ವಯಂ ಸೇವಕರಿಗೆ ಅಭಿನಂದನೆ ಎಂದು ಡಿವೈಎಸ್‌ಪಿ ಬಾಲರಾಜ್ ಹೇಳಿದರು.


2023ರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ನನ್ನ ಮತ ಮಾರಾಟಕ್ಕಿಲ್ಲ ಅಭಿಯಾನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಸಹಕರಿಸಿದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸ್ವಯಂಸೇವಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಸಮನ್ವಯ ಟ್ರಸ್ಟ್ ವತಿಯಿಂದ ಚುನಾವಣೆ ಸಂದರ್ಭಗಳಲ್ಲಿ ಜಿಲ್ಲಾಡಳಿತದ ಸಹಯೋಗದಲ್ಲಿ ಮತದಾನ ಜಾಗೃತಿಯನ್ನು ವಿಶೇಷ ರೀತಿಯಲ್ಲಿ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೂ ಹೆಚ್ಚು ಹೆಚ್ಚು ಮಾಹಿತಿ ತಲುಪುತ್ತಿದೆ. ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ತಿಳಿಸಿದರು.


ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿ, ಸಮನ್ವಯ ಟ್ರಸ್ಟ್ ಸಾವಿರಾರು ವಿದ್ಯಾರ್ಥಿ ಸ್ವಯಂ ಸೇವಕರ ಜತೆಗೂಡಿ ಶಿವಮೊಗ್ಗ ಜಿಲ್ಲೆಯ ಜನರಲ್ಲಿ ಮತದಾನ ಜಾಗೃತಿ ನಡೆಸಿದ ಕಾರ್ಯ ಶ್ಲಾಘನೀಯ. ಸ್ವ

ಯಂ ಸೇವಕ ವಿದ್ಯಾರ್ಥಿಗಳ ಮೂಲಕ ಶಿವಮೊಗ್ಗ ಜಿಲ್ಲೆಯ ಹಳ್ಳಿ ಹಳ್ಳಿಗಳಿಗೂ ಜಾಗೃತಿ ತಲುಪಿತು ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮನ್ವಯ ಟ್ರಸ್ಟ್ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮಾತನಾಡಿ, ಶಿವಮೊಗ್ಗ ಜಿಲ್ಲಾಡಳಿತವು ಚುನಾವಣಾ ಆಯೋಗದ ಮಾರ್ಗದರ್ಶನದಲ್ಲಿ ವಿಶೇಷ ಮತದಾನ ಜಾಗೃತಿ ನಡೆಸಿತು. ಸಮನ್ವಯ ಟ್ರಸ್ಟ್ ಕೂಡ ಚುನಾವಣಾ ದಿನಾಂಕ ಘೋಷಣೆ ಆದ ದಿನದಿಂದಲೂ ಮತದಾನದವರೆಗೂ ನಿರಂತರವಾಗಿ ಶಿವಮೊಗ್ಗ ಜಿಲ್ಲಾದ್ಯಂತ ಜಾಗೃತಿ ಮೂಡಿಸುವ ಕೆಲಸ ಮಾಡಿದೆ. ಮತದಾನ ಪ್ರಮಾಣ ಹೆಚ್ಚಾಗುವಲ್ಲಿ ಎಲ್ಲ ಸ್ವಯಂ ಸೇವಕರ ಪಾತ್ರವು ಮುಖ್ಯ ಎಂದು ತಿಳಿಸಿದರು.


ಕಟೀಲ್ ಅಶೋಕ್ ಪೈ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಮಂಜುನಾಥ ಸ್ವಾಮಿ ಉಪಸ್ಥಿತರಿದ್ದರು.

Exit mobile version