ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನೂತನ ಸಚಿವರಾಗಿ ಆಯ್ಕೆಯಾಗಿರುವ ಮಧು ಬಂಗಾರಪ್ಪ ಅವರನ್ನು ಮೇ ೩೧ ರಂದು ಅಭಿನಂದಿಸಲಾ ಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಕಾಂಗ್ರೆಸ್ ಕಚೇರಿ ಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪೂರ್ಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಶಿವಮೊಗ್ಗ ಜಿಲ್ಲೆಗೂ ಪ್ರಾತಿನಿಧ್ಯ ಸಿಕ್ಕಿದೆ. ಮಧು ಬಂಗಾರಪ್ಪ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಆಯ್ಕೆಯಾಗಿದ್ದಾರೆ. ಸಚಿವರಾದ ಮೇಲೆ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಮೇ ೩೧ ರಂದು ಬರಲಿದ್ದಾರೆ. ಅಂದು ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಹೃತ್ಪೂರ್ವಕವಾಗಿ ಸ್ವಾಗತಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಮಧು ಬಂಗಾರಪ್ಪ ಅವರು ಅಂದು ಬೆಳಗ್ಗೆ ೯.೩೦ ಕ್ಕೆ ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ. ಮಕ್ಕಳನ್ನು ಸ್ವಾಗತಿಸಿ ಶಾಲೆಯಲ್ಲಿ ಸಿಹಿ ಹಂಚಿ ಸೌಹಾರ್ದ ಭೇಟಿ ನೀಡಲಿದ್ದಾರೆ. ಅದಾದ ನಂತರ ಎಂ.ಆರ್.ಎಸ್. ವೃತ್ತದಿಂದ ಅವರನ್ನು ರ್ಯಾಲಿಯ ಮೂಲಕ ಮೆರವಣಿಗೆಯಲ್ಲಿ ಕರೆತರಲಾಗುವುದು. ಈಡಿಗ ಸಮುದಾಯ ಭವನದಲ್ಲಿ ಅಭಿನಂದಿಸಲಾಗುವುದು ಎಂದರು.
ಮಧು ಬಂಗಾರಪ್ಪ ಅವರ ಜೊತೆಗೆ ಶಾಸಕರಾಗಿ ಆಯ್ಕೆಯಾಗಿರುವ ಬೇಳೂರು ಗೋಪಾಲ ಕೃಷ್ಣ ಮತ್ತು ಬಿ.ಕೆ. ಸಂಗಮೇಶ್ ಅವರನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಪಕ್ಷದ ಹಿರಿಯ ಮುಖಂq ರಾದ ಕಾಗೋಡು ತಿಮ್ಮಪ್ಪ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು , ಮಾಜಿ ಸಚಿವರು, ಶಾಸಕರು, ಪದಾಧಿ ಕಾರಿಗಳು, ಕಾಂಗ್ರೆಸ್ ಕಾರ್ಯ ಕರ್ತರು, ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜಿ.ಡಿ. ಮಂಜುನಾಥ್, ಕಲಗೋಡು ರತ್ನಾಕರ್, ಇಸ್ಮಾಯಿಲ್ ಖಾನ್, ಚಂದ್ರ ಭೂಪಾಲ್, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಆರ್.ಸಿ. ನಾಯ್ಕ್, ಕಾಶಿ ವಿಶ್ವನಾಥ್, ಅಕ್ರಂ ಪಾಶಾ, ರವಿಕುಮಾರ್, ಚಂದ್ರಶೇಖರ್ ಮತ್ತಿತರರು ಇದ್ದರು.