Site icon TUNGATARANGA

ಮೆಟ್ರಿಕ್‍ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಅಸಕ್ತರು ಈ ಕೂಡಲೇ ಸಲ್ಲಿಸಿ

*ಶಿವಮೊಗ್ಗ, ಮೇ.31,
    2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ

.

ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್‍ಎಟಿಎಸ್ ((SATS)  ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ

ವಿಳಾಸ https://shp.karnataka.gov.in/ ಇಲ್ಲಿ ಅರ್ಜಿ ಸಲ್ಲಿಸುವುದು. ಜೂ.15 ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಿರುತ್ತದೆ.
ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ

ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ ಎಸ್‍ಎಟಿಎಸ್ ಐಡಿಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ

Exit mobile version