ಮಾಜಿ ಸಿಎಂ ಬಿ.ಎಸ್. ಯಡಿಯೂ ರಪ್ಪ ವಿರುದ್ಧದ ಭೂ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ೨೦೧೫ರಲ್ಲಿ ಲೋಕಾಯುಕ್ತ ಪೊಲೀಸರಿಗೆ ಈ ಪ್ರಕರಣ ಸಂಬಂಧ ದೂರು ನೀಡಲಾಗಿತ್ತು.
ಸಿಎಜಿ ವರದಿ ಆಧರಿಸಿ ೧೫ ಪಕ್ರರಣ ಗಳನ್ನು ಹೈಕೋರ್ಟ್ ರದ್ದು ಮಾಡಿತ್ತು..
ಹಿಂದಿನ ತೀರ್ಪನ್ನು ಆಧರಿಸಿ ಹೈಕೋರ್ಟ್ ೧೯ ಡಿಸೆಂಬರ್ ೨೦೧೫ರ ಪ್ರಕರಣವನ್ನು ರದ್ದು ಮಾಡಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಮಾಡಿದ ಮನವಿಯ ಮೇರೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಆದೇಶ ನೀಡಿದ್ದಾರೆ.