ಶಿವಮೊಗ್ಗ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು
ಜೂನ್-2023ರ ಮಾಹೆಯ ಪಡಿತರವನ್ನುಜೂನ್ 27ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ
ಹಾಗೂ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಾಯಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.