ಶಿವಮೊಗ್ಗ, ಜೂನ್ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2022-23 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ (6 ರಿಂದ 10ನೇ ತರಗತಿ) ವಾರ್ಷಿಕ ರೂ.10,000 ದಂತೆ ಪೆÇ್ರೀತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲು ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಲತಾಣ – ಮೂಲಕ ಜು.31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ಏ.01 ರಿಂದ ಮಾ.31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು
ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ
ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದವರು. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಕ್ರೀಡಾ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಅರ್ಹರಿರುತ್ತಾರೆ.
ಆಸಕ್ತ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ http://serviceonline.gov.in/karnataka ರಲ್ಲಿ ಜುಲೈ 31 ರೊಳಗಾಗಿ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.