Site icon TUNGATARANGA

ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಸಿದ್ಧತೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ

ಸೊರಬ: ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಸಿದ್ಧತೆ ಮಾಡಿಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್,

ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳಿಂದ ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಹಿಂಪ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಮಾತನಾಡಿ, ರಾಜ್ಯದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಹಿಂದೂ ವಿರೋಧಿ ನೀತಿಯನ್ನು

ಅನುಸರಿಸುತ್ತಿದೆ. ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಪೂರ್ವ ತಯಾರಿ ಮಾಡಿಕೊಂಡಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು.


ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಿಂದೂಗಳು ಸಹ ಮತ ನೀಡಿದ್ದಾರೆ ಎಂಬುದನ್ನು ಮರೆತಂತಿದೆ. ತಕ್ಷಣವೇ ರಾಜ್ಯ ಸರ್ಕಾರ ತನ್ನ ನಿರ್ಧಾರಗಳನ್ನು ಬದಲಾಯಿಸಿಕೊಂಡು ಮತಾಂತರ ನಿಷೇಧ ಕಾಯ್ದೆಯನ್ನು ಮುಂದುವರೆಸಬೇಕು.

ಶಾಲಾ ಪಠ್ಯ ಪುಸ್ತಕದಲ್ಲಿ ಈ ಹಿಂದೆ ಸೇರಿಸಲಾಗಿದ್ದ ರಾಷ್ಟ್ರ ಪುರುಷರ ಪರಿಚಯವನ್ನು ಸಹ ತೆಗೆದುಹಾಕುವ ಕ್ರಮ ಸಮಾಜದಲ್ಲಿ ಶಾಂತಿ ಕದಡುವ ನಿರ್ಧಾರವಾಗಿದ್ದು, ಅದನ್ನೂ ಸಹ ಕೈ ಬಿಡಬೇಕು. ಈ ಹಿಂದಿನ ಸರ್ಕಾರದ ಕಾಯ್ದೆಗಳನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.


ನಂತರ ಗ್ರೇಡ್-೨ ತಹಶೀಲ್ದಾರ್ ನಾಗರಾಜ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ವಿಹಿಂಪ ಕಾರ್ಯದರ್ಶಿ ಪ್ರಶಾಂತ್ ಶ್ಯಾಡಲಕೊಪ್ಪ,

.

ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ಪ್ರಮುಖರಾದ ರಾಜರಾಮ್, ಮಹೇಶ್ ಗೋಖಲೆ, ರವಿ ಗುಡಿಗಾರ್, ಅಶೋಕ್ ಚಲ್ಲೂರ್, ಸುಧೀರ್ ಪೈ, ರಾಜು ದಾಮ್ಲೆ, ರಜನಿನಾಯ್ಕ್, ಪ್ರಸನ್ನಶೇಟ್ ಚಂದ್ರಗುತ್ತಿ, ಸಂತೋಷ್ ಸೊಪ್ಪಿನಕೇರಿ, ನಾಗರಾಜ ಅಂಬಾರಿ, ಗಣಪತಿ ಚಂದ್ರಗುತ್ತಿ ಸೇರಿದಂತೆ ಇತರರಿದ್ದರು.

Exit mobile version