Site icon TUNGATARANGA

ಕಾನೂನು ಪದವೀಧರರಿಗೆ ನ್ಯಾಯವಾದಿ ತರಬೇತಿಗಾಗಿ ಅರ್ಜಿ ಆಹ್ವಾನ


ಶಿವಮೊಗ್ಗ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿನ ಆಡಳಿತ ನ್ಯಾಯಾಧಿಕರಣ ಯೋಜನೆಯಡಿ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರ್ರಾಯೋಗಿಕ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

.


ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಒಳಪಡುವ 06 ಅಭ್ಯರ್ಥಿಗಳಿಗೆ ಶಿಷ್ಯ ವೇತನ ನೀಡುವ ಸಲುವಾಗಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಆನ್‍ಲೈನ್ ವಿಳಾಸ https://tw.kar.nic.in ಮೂಲಕ ಜುಲೈ 24 ರೊಳಗಾಗಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ನೀಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿನವರಾಗಿದ್ದು, ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ಮೀರಿರಬಾರದು. ಅಭ್ಯರ್ಥಿಯು ವಕೀಲರ ಸಂಘದಲ್ಲಿ ಹೆಸರನ್ನು ನೋಂದಾಯಿಸಿರಬೇಕು. ತರಬೇತಿಯ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10000/- ಶಿಷ್ಯ ವೇತನ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಕ್ಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ನಿಯೋಜಿಸುವುದು ಹಾಗೂ ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋದರೆ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ವಾಪಸ್ಸು ಪಡೆಯಲಾಗುವುದು

ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದುವವರಿಗೆ ಅನ್ವಯಿಸುವುದಿಲ್ಲ. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಅರ್ಜಿಯಲ್ಲಿನ ಮಾಹಿತಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08182-279222/9482762350 ಗಳನ್ನು ಸಂಪರ್ಕಿಸುವುದು .

Exit mobile version