ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ, ಶಾಂತಿ ಕದಡುವ ಕಿಡಿಗೇಡಿಗ ಳನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾ ರಿಯಾಗಿರುತ್ತದೆ. ಒಂದು ವೇಳೆ ಯಾವುದೇ ಕಿಡಿಗೇಡಿಗಳು ಸಮಸ್ಯೆಯನ್ನುಂಟು ಮಾಡು ವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾ ಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಅವರು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ, ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡುತ್ತಾ, ಕಾನೂನು ಬಾಹೀರವಾದ ಕೆಲಸಗಳನ್ನು ಮಾಡಿದರೆ ಅಂತಹ ಸಂದರ್ಭಗಳಲ್ಲಿ
ಸಮಸ್ಯೆಗಳು ಉದ್ಭವವಾಗುತ್ತದೆ. ಕಾನೂನಿನ ಚೌಕಟ್ಟಿನ ಒಳಗಿರುವ ಅವಕಾಶಗಳನ್ನು ಬಳಸಿಕೊಂಡಾಗ ಯಾವುದೇ ಸಮಸ್ಯೆಗಳಿಗೆ ಅವಕಾಶವಿರುವುದಿಲ್ಲ.
ಆದ್ದರಿಂದ ಎಲ್ಲರೂ ಕಾನೂನನ್ನು ಪಾಲನೆ ಮಾಡುವುದು ಅಗತ್ಯವಾಗಿದೆ ಎಂದರು.ಸಭೆಯಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮುಖಂಡರು, ವಖ್ಫ್ ಬೋರ್ಡ್ ಅಧಿಕಾರಿಗಳು, ಭದ್ರಾವತಿ ನಗರಸಭೆಯ ಚುನಾಯಿತ ಸದಸ್ಯರು ಉಪಸ್ಥಿತರಿದ್ದರು ಮತ್ತು ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡುವುದಾಗಿ ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭುಮರೆಡ್ಡಿ, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು ಜಿತೇಂದ್ರ ಕುಮಾರ್ ದಯಾಮ, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕ ಗುರುರಾಜ್ ಮೈಲಾರ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ನಿರೀಕ್ಷಕ ಲಕ್ಷ್ಮೀಪತಿ ಮತ್ತಿರರರಿದ್ದರು.
ಆಕ್ಷೇಪಾರ್ಹ ವೀಡಿಯೋ / ಫೋಟೋಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡುವುದು ಕಾನೂನು ರೀತ್ಯಾ ಅಪರಾಧವಾಗಿದ್ದು, ಅಂತಹವರ ವಿರುದ್ದ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ವ್ಯಕ್ತಿಗಳು ಅನಾವಶ್ಯಕವಾಗಿ ತೊಂದರೆಯನ್ನುಂಟು ಮಾಡುತ್ತಿರುವುದು ಕಂಡು ಬಂದಲ್ಲಿ ಪೊಲೀಸ್ ಇಲಾಖಾ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ. ಪೊಲೀಸ್ ಇಲಾಖಾ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಿದ್ದು, ಎಲ್ಲರೂ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಿ.
-ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ