Site icon TUNGATARANGA

ಶಿವಮೊಗ್ಗ/ ಆಶ್ರಯ ಯೋಜನೆಯಡಿ ಆನ್‍ಲೈನ್ ಅರ್ಜಿ ಆಹ್ವಾನ

ಸುದ್ದಿ, ಮತ್ತು ಜಾಹೀ944825683183


ಶಿವಮೊಗ್ಗ, ಜೂನ್ 27:

ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.


ಅರ್ಜಿದಾರರು ಶಿವಮೊಗ್ಗ ನಗರ ಪ್ರದೇಶದಲ್ಲಿ ವಾಸವಾಗಿದ್ದು, ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದವರು ಸ್ವಂತ ನಿವೇಶನ/ಮನೆಯನ್ನು ಹೊಂದಿರಬಾರದು. ಅರ್ಜಿಯನ್ನು ಮಹಿಳಾ ಫಲಾನುಭವಿಯ ಹೆಸರಿನಲ್ಲಿಯೇ ಸಲ್ಲಿಸುವುದು, ಪುರುಷ ಅಭ್ಯರ್ಥಿಯಾಗಿದ್ದಲ್ಲಿ ಮಾಜಿಸೈನಿಕ, ವಿಕಲಚೇತನ, ಸ್ವಾತಂತ್ರ್ಯ ಯೋಧ, ವಿಧುರ ಹಾಗೂ ಹಿರಿಯ ನಾಗರೀಕರಾಗಿರಬೇಕು.

ಬೇರೆ ಯಾವುದೇ ಯೋಜನೆಯಡಿಯಲ್ಲಿ ನಿವೇಶನ/ವಸತಿ ಸೌಲಭ್ಯವನ್ನು ಪಡೆದಿರಬಾರದು ಹಾಗೂ ಈ ಹಿಂದೆ ಯಾವುದಾದರೂ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ವಿವರ ನೀಡುವುದು. ವಾರ್ಷಿಕ ರೂ. 86,700/-ಗಳಿಂದ ಆದಾಯ ಹೊಂದಿರಬೇಕು. ತೃತೀಯ ಲಿಂಗಿಗಳೂ ಸಹ ಅರ್ಜಿ ಸಲ್ಲಿಸಬಹುದು.
ಆಸಕ್ತರು ಪಾಲಿಕೆ ವೆಬ್‍ಸೈಟ್ shivamoggacitycorp.org ರ ‘ಆಶ್ರಯ ಯೋಜನೆ ಅಪ್ಲಿಕೇಷನ್’ ಮೆನುವಿನಲ್ಲಿ ಸೆಪ್ಟಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸುವುದು. ಅಕ್ಟೋಬರ್ 07 ರೊಳಗಾಗಿ ಬ್ಯಾಂಕ್ ಮೂಲಕ ನಿಗದಿತ ಶುಲ್ಕವನ್ನು ಪಾವತಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಸಲಹೆ/ಮಾಹಿತಿಗಾಗಿ ದೂ.ಸಂ.:08182-220799 ಹಾಗೂ ತಾಂತ್ರಿಕ ಸಲಹೆಗಾಗಿ ದೂ.ಸಂ.: 08182-268544/268545 ಗಳನ್ನು ಸಂಪರ್ಕಿಸುವುದು.

Exit mobile version