Site icon TUNGATARANGA

ಭದ್ರಾವತಿ : ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು 2.80 ಲಕ್ಷ ರೂ. ದಂಡ


ಭದ್ರಾವತಿ: 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 2.8 ಲಕ್ಷ ರೂ. ದಂಡ ವಿಧಿಸಲಾಗಿದೆ.

ಪ್ರಕರಣ ಕುರಿತಂತೆ ತೀರ್ಪು ನೀಡಿರುವ ಎಫ್’ಟಿಎಸ್’ಸಿ (ಪೊಕ್ಸೋ) ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು, ಆರೋಪಿಗೆ ಮೂರು ವರ್ಷ ಕಠಿಣ ಕಾರಾಗೃಹ ವಾಸ ಹಾಗೂ 2.80 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.


ಘಟನೆ ಹಿನ್ನೆಲೆ:
2019ರಲ್ಲಿ ಭದ್ರಾವತಿ ತಾಲೂಕಿನ 23 ವರ್ಷದ ವ್ಯಕ್ತಿಯೊಬ್ಬನು, 11 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆ ಎಂದು ಭದ್ರಾವತಿ ಹಳೇನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಆಗಿನ ತನಿಖಾಧಿಕಾರಿಗಳಾದ ಭದ್ರಾವತಿ ನಗರ ವೃತ್ತ ಸಿಪಿಐ ಎನ್. ನಂಜಪ್ಪ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವ್ಯಕ್ತಿಯ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆಯನ್ನು ಪ್ರಕಟಿಸಿದೆ.

Exit mobile version