Site icon TUNGATARANGA

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ |ಯುವ ಕಾಂಗ್ರೆಸ್ ನಿಂದ ಸಂಸದರ ಮನೆಗೆ ಮುತ್ತಿಗೆ

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗ  ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ- ಸಂಸದರ ಮನೆಗೆ ಮುತ್ತಿಗೆ – ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

*ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ  ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ನೀಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಹಾಗೂ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಸೇರಿದಂತೆ ಹಲವು ಪರಿಹಾರದ ಹಣವನ್ನು

ಬಿಡುಗಡೆ ಮಾಡದೆ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಮತ್ತು ದ್ವೇಷ ರಾಜಕಾರಣವನ್ನು ಖಂಡಿಸಿ ಹಾಗೂ ಕರ್ನಾಟಕದಿಂದ ಆಯ್ಕೆಯಾದ 25 ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ತುಟಿ ಬಿಚ್ಚದೆ ಅಸಮರ್ಥರಾಗಿರುವ ಸಂಸದರ ವಿರುದ್ಧ  ಪ್ರತಿಭಟನೆ ನಡೆಸಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಯಿತು ಈ ಸಂದರ್ಭದಲ್ಲಿ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು  ಪೊಲೀಸರು ಬಂಧಿಸಿದ್ದಾರೆ*

*9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ  ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ,

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಬಡವರ ಗ್ಯಾರಂಟಿಯ ಯೋಜನೆಗಳನ್ನು ಒಪ್ಪಿ ಹಾಗೂ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ 135 ಕಾಂಗ್ರೆಸ್ ಪಕ್ಷದ  ಶಾಸಕರನ ಆಯ್ಕೆ ಮಾಡಿ  ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದು  ಇವೆಲ್ಲವನ್ನು ಮನಗಂಡ ಕೇಂದ್ರದ ನರೇಂದ್ರ ಮೋದಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಚ್ಚುವರಿ ಅಕ್ಕಿಗಾಗಿ ಪ್ರಸ್ತಾವನೆ ಸಲ್ಲಿಸಿದರು ರಾಷ್ಟ್ರೀಯ ಆಹಾರ ನಿಗಮಕ್ಕೆ ಕರ್ನಾಟಕಕ್ಕೆ ಹೆಚ್ಚುವರಿ ಹಕ್ಕಿಯನ್ನು ನೀಡಬಾರದೆಂದು ತಾಕೀತು ಮಾಡಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ವಿಫಲ ಮಾಡಲು ಹೊರಟಿರುವುದು ದ್ವೇಷ ರಾಜಕಾರಣದ ನೈಜ್ಯ ಉದಾರಣೆ ಸಾಕ್ಷಿಯಾಗಿದೆ

ಜೊತೆಗೆ ಕರ್ನಾಟಕದಿಂದ ಆಯ್ಕೆಯಾಗಿ ಹೋದ 25 ಬಿಜೆಪಿ ಸಂಸದರು ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಮೇಲೆ ಯಾವುದೇ ಒತ್ತಡವನ್ನು ಹೇರದೆ ರಾಜ್ಯಕ್ಕೆ ಬರಬೇಕಾದಂತಹ ಎಲ್ಲ ಯೋಜನೆಗಳಲ್ಲೂ ಹಾಗೂ ಎಸ್ ಟಿ ಸೇರಿದಂತೆ ಎಲ್ಲಾ ಅತಿವೃಷ್ಟಿ ಮತ್ತು ಅನಾವೃಷ್ಟಿ  ಪರಿಹಾರದಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಆದರೂ ಸಂಸತ್ತಿನಲ್ಲಿ ತುಟಿ ಬಿಚ್ಚದೆ ಅಸಮರ್ಥರಾಗಿರುವ ಬಿಜೆಪಿ ಸಂಸದರು ವಿಕಾಸ ಯಾತ್ರೆ ಮಾಡುತ್ತಿರುವುದು ಹಾಸ್ಯಸ್ಪದ ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ರಾಜ್ಯಕ್ಕೆ ಬರಬೇಕಾದ ಹೆಚ್ಚುವರಿ ಅಕ್ಕಿಯನ್ನು ಖರೀದಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ*

*ಈ ಪ್ರತಿಭಟನೆ ನೇತೃತ್ವವನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‌.ಪಿ ಗಿರೀಶ್ , ಉತ್ತರ ಬ್ಲಾಕ್ ಯುವ  ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ  ಈಟಿ ನಿತಿನ್, ನೂರಾರು ಯುವ ಕಾಂಗ್ರೆಸ್ನ ಕಾರ್ಯಕರ್ತರು ಉಪಸ್ಥಿತರಿದ್ದರು*

Exit mobile version