ಮಣಿಪಾಲ್ ಆರೋಗ್ಯ ಕಾರ್ಡ್ ೨೦೨೩ರ ನೊಂದಣಿ ಪ್ರಕ್ತಿಯೆಗೆ ಚಾಲನೆ ನೀಡಲಾಗಿದ್ದು, ಇದರ ಸದುಪಯೋಗವನ್ನು ಶಿವಮೊಗ್ಗ ಸುತ್ತಮುತ್ತಲ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ.ಎಂ.ಎ. ಪೈ ಅವರ ೧೨೫ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಇವರ ನೆನಪಿಗಾಗಿ ಎಲ್ಲರಿಗೂ ಸುಲಭ ದರದಲ್ಲಿ ಆರೋಗ್ಯ ಲಭಿಸಬೇಕು ಎಂಬ ಹಿನ್ನೆಲೆಯಲ್ಲಿ ಈಗಾಗಲೇ ಜನಪ್ರಿಯವಾಗಿರುವ ಮಣಿಪಾಲ್ ಆರೋಗ್ಯ ಕಾರ್ಡಿನ ನೋಂದಣಿಯನ್ನು ಈಗ ಆರಂಭಿಸುತ್ತಿದ್ದೇವೆ.
ಸಾರ್ವಜನಿಕರು ಆಸ್ಪತ್ರೆಯ ಅಧಿಕೃತ ಪ್ರತಿನಿಧಿಗಳ ಬಳಿ ಅಥವಾ ಆನ್‌ಲೈನ್ ಮೂಲಕವೂ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.
ಆರೋಗ್ಯ ಕಾರ್ಡ್ ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ ಎಂದರು.
ಮಣಿಪಾಲ್ ಆರೋಗ್ಯ ಕಾರ್ಡ್ ೨೦೨೩ರ ಯೋಜನೆಯು ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. ೩೦೦, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳಿಗೆ ರೂ. ೬೦೦ ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳು ಮತ್ತು ೪ ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ)ರೂ. ೭೫೦. ಇದೊಂದು ಹೆಚ್ಚುವರಿ ಲಾಭವಾಗಿದೆ. ೨ ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ.೫೦೦, ಕುಟುಂಬಕ್ಕೆ ರೂ. ೮೦೦ ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. ೯೫೦ ಆಗಿರುತ್ತದೆ ಎಂದರು.
ಆಸ್ಪತ್ರೆಯ ಸಹ ವ್ಯವಸ್ಥಾಪಕ ಬಿ.ಎಸ್. ಕೃಷ್ಣಪ್ರ ಸಾದ್ ಮಾತನಾಡಿ, ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು, ಹೊರ ರೋಗಿ ವಿಭಾಗದಲ್ಲಿ, ಒಳ ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇಕಡಾ ೫೦ ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇಕಡಾ ೩೦ ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ ೨೦ ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ ೨೦ ರಿಯಾಯಿತಿ, ಔಷಧಾಲಯಗಳಲ್ಲಿ ಶೇಕಡಾ ೧೨ರವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿ
ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ ೨೫ ರಿಯಾಯಿತಿ ಪಡೆಯಬಹುದು ಎಂದರು.
ಅಲ್ಲದೆ ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿ ಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗ ಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾ ಯಿತಿ ಪ್ರಯೋಜನ ಪಡೆಯಬಹುದು ಎಂದರು.
ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ ೮೮೬೭೫೭೯೭೯೭ ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು. ಕಳೆದ ೨೨ ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ. ಇತರ ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು
ತಿತಿತಿ.mಚಿಟಿiಠಿಚಿಟheಚಿಟಣhಛಿಚಿಡಿಜ.ಛಿom ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು . ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ. ೯೯೮೦೮೫೪೭೦೦/ ೦೮೨೦೨೯೨೩೭೪೮ ಗೆ ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಮಣಿಪಾಲ ಆರೋಗ್ಯ ಕಾರ್ಡಿನ ಮುಖ್ಯ ಸಂಯೋಜಕ ನವೀನ್ ಕೆ. ಇದ್ದರು.