ಸಾಗರ : ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೋಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.
ಕಳೆದ ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಪೋಷಕರು, ಶಾಲಾಭಿವೃದ್ದಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಗುರುವಾರ ಶಾಲೆಯ
ಕಾಂಪೋಂಡ್ ಕುಸಿದು ಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಸ್ಥಳೀಯ ನಗರಸಭೆ ಸದಸ್ಯ ಸೈಯದ್ ಜಾಕೀರ್, ಶಾಲಾಭಿವೃದ್ದಿ ಸಮಿತಿ ರಶೀದ್, ಅಕ್ಬರ್ ಖಾನ್ ಇನ್ನಿತರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.