Site icon TUNGATARANGA

ಸಾಗರ: ಭ್ರಷ್ಟರ ಬೇಟೆಗೆ ಸಜ್ಜಾದ ಲೋಕಯುಕ್ತ| ಜುಲೈ 12 ರಂದು ಲೋಕಾಯುಕ್ತ ಕುಂದು-ಕೊರತೆ ಸಭೆ

ಶಿವಮೊಗ್ಗ, ಜುಲೈ 06 ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಜುಲೈ 12 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ

ಸಾಗರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದು, ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ

ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ

ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.

Exit mobile version